ಮುಂಬಯಿ ನಗರದಲ್ಲಿರುವ ಗೋರೆಗಾಂವ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಜನ ಸಜೀವ ದಹನವಾಗಿ, 40ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಇಂದು ಬೆಳಗಿನ ಜಾವ 3ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಬೆಂಕಿಯ ಕೆನ್ನಾಲೆಗೆ ಹಲವಾರು ವಾಹನಗಳು ಸುಟ್ಟು ಕರಕಲಾಗಿವೆ.
ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದಿ ಸಿಬ್ಬಂದಿ ಆಗಮಿಸಿ, ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ನೆಲಮಹಡಿಯಲ್ಲಿನ ಸ್ಕ್ರ್ಯಾಪ್ ಸಾಮಾಗ್ರಿ ಹಾಗೂ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಒಟ್ಟು 6 ಜನ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ.