ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಅನ್ನಾತೆ’ ಚಿತ್ರ ಮುಂದಿನ ವರ್ಷದ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ತೆರೆಗೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ, ಈಗಿನ ಪರಿಸ್ಥಿತಿಯಲ್ಲಿ ಅದು ಮತ್ತಷ್ಟು ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಇದರ ನಡುವೆ ಬಹುನಿರೀಕ್ಷಿತ ಚಿತ್ರಕ್ಕೆ ಪಡೆದಿರುವ ಸಂಭಾವನೆಯನ್ನು ರಜನಿಕಾಂತ್ ಅವರು ಚಿತ್ರದ ನಿರ್ಮಾಪಕರಿಗೆ ವಾಪಸ್ ಮಾಡಿದ್ದಾಎಂಬ ಸುದ್ದಿ ಹರಿದಾಡ್ತಿದ್ದು, ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಶಿವ ನಿರ್ದೇಶನದ ಈ ಚಿತ್ರ, ರಜನಿಕಾಂತ್ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕಳೆದ ವರ್ಷದ ಡಿಸೆಂಬರ್ನಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಬಹುಬಜೆಟ್ ಚಿತ್ರವಾಗಿರುವುದರಿಂದ ಚಿತ್ರೀಕರಣ ಚಟುವಟಿಕೆಗಳು ವಿಳಂಬವಾದಷ್ಟೂ ನಿರ್ಮಾಪಕರಿಗೆ ನಷ್ಟ ಎದುರಾಗಿದೆ. ಕೊರೊನಾ ಭೀತಿಯಲ್ಲಿ ನಷ್ಟದಲ್ಲಿರುವ ನಿರ್ಮಾಪರು ಸಂಭಾವನೆಯನ್ನು ಶೇ 50ರಷ್ಟು ಇಳಿಸಿಕೊಳ್ಳುವಂತೆ ರಜನಿ ಬಳಿ ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇನ್ನೊಂದೆಡೆ ‘ಅನ್ನಾತೆ’ ಚಿತ್ರವನ್ನೇ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ತಮಗೆ ನೀಡಲಾಗಿದ್ದ ಸಂಭಾವನೆಯ ಪೂರ್ತಿ ಮೊತ್ತವನ್ನು ನಿರ್ಮಾಪಕರಿಗೆ ರಜನಿಕಾಂತ್ ವಾಪಸ್ ನೀಡಿದ್ದಾರೆ. ಹೀಗಾಗಿ ಬಹುನಿರೀಕ್ಷಿತ ಚಿತ್ರ ‘ಅನ್ನಾತೆ’ ಪೂರ್ಣಗೊಳ್ಳುವುದಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ. ಮತ್ತೊಂದೆಡೆ ಪರಿಸ್ಥಿತಿ ಸುಧಾರಿಸಿದ ನಂತರ ಚಿತ್ರೀಕರಣ ಆರಂಭ ಮಾಡೋಣ ಎಂದು ಮಾತುಕತೆ ನಡೆಸಲಾಗಿದೆ ಎಂದೂ ಹೇಳಲಾಗುತ್ತಿದೆ.
ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ:ಎರಡು ಸಾವು
ಶಿವಮೊಗ್ಗ: ಬಸ್ಸು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ...