ಯುವಜನರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ಸರಕಾರ ಬದ್ಧ : ಪ್ರಧಾನಿ ಮೋದಿ
ಜಮ್ಮು- ಕಾಶ್ಮೀರ: ಇಲ್ಲಿನ ಯುವಜನೆತೆಯ ಪೂರ್ವಿಕರು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹೀಗಾಗಿ ಇಗಿನ ಯುವಜನತೆ ಕಷ್ಟವನ್ನು ಅನುಭವಿಸಬಾರದು ವರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಚಾಯತ್ ರಾಜ್ ದಿವಸ್ ಅಂಗವಾಗಿ ಜಮ್ಮು&ಕಾಶ್ಮೀರದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ನಲ್ಲಿ ಮಾತನಾಡಿದ ಅವರು ಜಮ್ಮು -ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಆಳವಾಗಿ ಬೇರೂರಿದೆ. ಅದನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿದೆ. ಇದು ದೊಡ್ಡ ಬದಲಾವಣೆಯ ಸಂಕೇತ ಎಂದರು.
This year's Panchayati Raj Day, being celebrated in J&K marks a big change. It is a matter of great pride that when democracy has reached the grassroot level in J&K, I am interacting with you all from here: PM Modi in Jammu pic.twitter.com/YRaE3azfJo
— ANI (@ANI) April 24, 2022
ಅಲ್ಲದೇ ಇಲ್ಲಿನ ಪ್ರಜಾಪ್ರಭುತ್ವವು ತಳಮಟ್ಟದಲ್ಲಿ ಬೆಳೆದಿದೆ ಎಂಬುದು ಹೆಮ್ಮೆಯ ವಿಷಯ. ಅದಕ್ಕಾಗಿಯೇ ನಾನು ಇಲ್ಲಿಂದಲೇ ದೇಶದಾದ್ಯಂತ ಇರುವ ಪಂಚಾಯತ್‌ಗಳೊಂದಿಗೆ ಸಂವಹನ ನಡೆಸುತ್ತಿದ್ದೇನೆ. ಕೇಂದ್ರಾಡಳಿತ ಪ್ರದೇಶ ಅಭಿವೃದ್ಧಿಯ ಹೊಸ ಶಕೆಯನ್ನು ಬರೆಯಲು ಸಜ್ಜಾಗಿದೆ. ಸ್ವಾತಂತ್ರ್ಯ ಬಂದ 7 ದಶಕಗಳ ಅವಧಿಯಲ್ಲಿ ಇಲ್ಲಿ ಕೇವಲ 17,000 ಕೋಟಿ ರೂಪಾಯಿ ಖಾಸಗಿ ಹೂಡಿಕೆಯನ್ನು ಮಾತ್ರ ಮಾಡಲಾಗಿತ್ತು. ಇದೀಗ ಅದು 38,000 ಕೋಟಿಗೆ ತಲುಪಿದೆ. ಇದು ಇಲ್ಲಿನ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಪ್ರಧಾನಿ ಹೇಳಿದರು.
ಇನ್ನೂ ಪ್ರಧಾನಿ ಮೋದಿ ಅವರು 370ನೇ ವಿಧಿ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಸಂಪರ್ಕ ಮತ್ತು ವಿದ್ಯುತ್ ಗೆ ಸಂಬಂಧಿಸಿದಂತೆ 20,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದರು.
ಹಾಗೇ ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ ನಿರ್ಮಿಸಲಿರುವ 850 ಮೆಗಾವ್ಯಾಟ್ ರಾಟಲ್ ಜಲವಿದ್ಯುತ್ ಯೋಜನೆ ಮತ್ತು 540 ಮೆಗಾವ್ಯಾಟ್ ಕ್ವಾರ್ ಜಲವಿದ್ಯುತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದರು. 850 ಮೆಗಾವ್ಯಾಟ್ ರಾಟಲ್ ಜಲವಿದ್ಯುತ್ ಯೋಜನೆಯನ್ನು ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ ಸುಮಾರು 5,300 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.