ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಪಂದ್ಯಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಆದರೆ ಜನಸಂದಣಿ ನಿಯಂತ್ರಣ ಮತ್ತು ಭದ್ರತಾ ವ್ಯವಸ್ಥೆ ಸುಗಮವಾಗಿರಬೇಕು. ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿಯ ಶಿಫಾರಸುಗಳನ್ನು ಪಾಲಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ.
ಇದೇ ವೇಳೆ, ಬೆಳಗಾವಿಯಲ್ಲಿ KSCA ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಪದಾಧಿಕಾರಿಗಳ ತಂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಂದ್ಯಗಳ ಆಯೋಜನೆ ಮುಂದುವರಿಸಲು ವಿನಂತಿಸಿದ್ದಾರೆ. ತಂಡದ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, IPL ಪಂದ್ಯಗಳನ್ನು ಬೆಂಗಳೂರಿನಲ್ಲಿ ಮುಂದುವರಿಸಲು ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎನ್ನುವ ಸೂಚನೆ ದೊರೆತಿದೆ.








