ಬೆಂಗಳೂರು: ಕೊರೊನಾ ಹಾಗೂ ಲಾಕ್ಡೌನ್ನಿಂದಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಶಾಲೆಗಳು ತೆರೆದಿರಲಿಲ್ಲ. ಜನವರಿ 1ರಿಂದ 10, 11, 12ನೇ ತರಗತಿಗಳು ಆರಂಭವಾಗಿದ್ದು, 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ತರಗತಿಗಳು ನಡೆಯುತ್ತಿವೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ನಡುವೆ, ಒಂದು ವರ್ಷದಿಂದ ಶಾಲೆಗಳು ನಡೆಯದೇ ಇದ್ದರೂ, ಪೂರ್ತಿ ಶುಲ್ಕ ನೀಡುವಂತೆ ಖಾಸಗಿ ಶಾಲೆಗಳು ಪೋಷಕರ ಮೇಲೆ ನಿರಂತರ ಒತ್ತಡ ಹೇರುತ್ತಿದ್ದವು. ಲಾಕ್ಡೌನ್ನಿಂದ ಮೊದಲೇ ಆರ್ಥಿಕ ಸಂಕಷ್ಟದಲ್ಲಿದ್ದ ಪೋಷಕರು ಶುಲ್ಕ ಕಟ್ಟಲಾಗದೇ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿತ್ತು. ಸರ್ಕಾರ ಶುಲ್ಕ ಕಡಿತ ಆದೇಶ ಮಾಡದೇ ಇದ್ದರೆ ನಾಳೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನೂ ಪೋಷಕರು ನೀಡಿದ್ದರು.
ಹೀಗಾಗಿ ಪೋಷಕರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಶಾಲೆಗಳ ಭೋದನಾ ಶುಲ್ಕದಲ್ಲಿ ಶೇ.30ರಷ್ಟು ಕಡಿತ ಮಾಡಿ, ಕೇವಲ ಶೇ.70ರಷ್ಟು ಶುಲ್ಕವನ್ನು ಮಾತ್ರ ಪಡೆಯುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಈ ಆದೇಶದಲ್ಲಿ ಸ್ಟೇಟ್ ಸಿಲಬಸ್, ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮ ಭೋದನೆ ಮಾಡುತ್ತಿರುವ ಎಲ್ಲಾ ಶಾಲೆಗಳು ಶೇ.70ರಷ್ಟು ಭೋದನಾ ಶುಲ್ಕವನ್ನು ಪೋಷಕರಿಂದ ಸಂಗ್ರಹಿಸಬೇಕು.
ಇದರ ಜತೆಗೆ ಡೊನೇಶನ್, ಲೈಬ್ರರಿ, ಲ್ಯಾಬ್, ಸ್ಪೋಟ್ರ್ಸ್ ಸೇರಿದಂತೆ ಯಾವುದೇ ಮಾದರಿಯ ಅಭಿವೃದ್ಧಿ ಶುಲ್ಕಗಳನ್ನು ಸಂಗ್ರಹಿಸುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಒಂದು ಟರ್ಮ್ನ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದರು. 30 ಸಾವಿರ ಮೇಲ್ಪಟ್ಟು ಫೀಸ್ ವಸೂಲಿ ಮಾಡುವ ಶಾಲೆಗಳು ಮಾತ್ರ ಶುಲ್ಕ ಕಡಿತ ಮಾಡಿದರೆ ಸಾಕು ಎಂಬ ಅಭಿಪ್ರಾಯವೂ ಕೇಳಿ ಬಂದಿತ್ತು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಸರ್ಕಾರ, ಎಲ್ಲಾ ಪಠ್ಯಕ್ರಮ ಭೋದನೆ ಮಾಡುತ್ತಿರುವ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕದಲ್ಲಿ ಶೇ.70ರಷ್ಟನ್ನು ಮಾತ್ರ ಪಡೆಯಲು ನಿರ್ಧರಿಸಲಾಗಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel