ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದರೂ, ವಿಧಾನಪರಿಷತ್ನ ಅನುಮೋದನೆ ಪಡೆದಿಲ್ಲ. ಗೋಹತ್ಯೆ ತಿದ್ದುಪಡಿ ಕಾಯ್ದೆ ಜಾರಿಗೆ ತರಬೇಕಾದರೆ ಸುಗ್ರೀವಾಜ್ಞೆ ಅಥವಾ ವಿಧಾನಪರಿಷತ್ನಲ್ಲಿ ಅನುಮೋದನೆ ಪಡೆಯಬೇಕು. ಆದರೆ, ವಿಧಾಪರಿಷತ್ ಕಲಾಪ ದಿಢೀರ್ ಅನಿರ್ಧಿಷ್ಟಾವಧಿಗೆ ಮುಂದೂಡಿದ ಹಿನ್ನೆಲೆಯಲ್ಲಿ ಮಸೂದೆ ಪಾಸ್ ಮಾಡಿಸಿಕೊಳ್ಳುವಂತೆ ಬಿಜೆಪಿಯಲ್ಲಿ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಮಸೂದೆ ಅಂಗೀಕರಿಸಲು ಡಿ.15ರಂದು ಒಂದು ದಿನ ವಿಧಾನಪರಿಷತ್ನ ವಿಶೇಷ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ಸಂಬಂಧ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ ಎನ್ನಲಾಗಿದೆ.
ತಮ್ಮ ನಿವಾಸದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನಪರಿಷತ್ನ ಅನುಮೋದನೆ ಸಿಕ್ಕಿಲ್ಲ. ಸಭಾಪತಿ ಕಲಾಪವನ್ನು ದಿಢೀರ್ ಮುಂದೂಡಿದರು. ಆ ಅಧಿಕಾರವೂ ಸಭಾಪತಿಗಿಲ್ಲ. ಕಾಯ್ದೆ ಜಾರಿ ಮಾಡಲು ಅವರು ಸಹಕಾರ ನೀಡುತ್ತಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಹೊರಡಿಸಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದೂ ತಿಳಿಸಿದ್ದರು.
ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ, ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿರುವ ಗೋಹತ್ಯೆ ಮಸೂದೆ, ವಿಧಾನಪರಿಷತ್ತಿನಲ್ಲಿ ಅನುಮೋದನೆಗೆ ಒಂದು ದಿನದ ವಿಶೇಷ ಅಧಿವೇಶನ ನಡೆಸಿ ಅಂಗೀಕರಿಸಲು ಬಿಜೆಪಿಯಲ್ಲಿ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ.
ಗೋಹತ್ಯೆ ಮಸೂದೆ ಜತೆಗೆ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯದ ನೋಟಿಸ್ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ವಿಧಾನಪರಿಷತ್ ಕಾರ್ಯದರ್ಶಿಯಗೆ ಅಧಿವೇಶನ ಕರೆಯಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಸರ್ಕಾರ ಪತ್ರ ಬರೆದಿದೆ. ಸಚಿವ ಕೋಟ ಶ್ರೀನಿವಾಸಪೂಜಾರಿ ಮತ್ತು ಪರಿಷತ್ನ ಐವರು ಸದಸ್ಯರು ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಭೇಟಿ ಮಾಡಿ, ಒಂದು ದಿನದ ವಿಶೇಷ ಅಧಿವೇಶನ ನಡೆಸಲು ಪರಿಷತ್ ಕಾರ್ಯದರ್ಶಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.
ವಿಧಾನಪರಿಷತ್ ಅಧಿವೇಶನ ಇದೇ 17 ರವರೆಗೆ ನಡೆಸಲು ಸದನ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ, ಸಭಾಪತಿ ಗುರುವಾರ ಏಕಾಏಕಿ ಅಧಿವೇಶನವನ್ನು ಅನಿರ್ಧಿಷ್ಟ ಕಾಲ ಮುಂದೂಡಿದರು. ಇದರ ಹಿಂದೆ ದುರುದ್ದೇಶ ಇದೆ. ಆದ್ದರಿಂದ ಡಿ.15 ರಂದು ಅಧಿವೇಶನ ಕರೆಯಲು ಸೂಚನೆ ನೀಡಬೇಕು ಎಂದು ಕೋಟ ಶ್ರೀನಿವಾಸಪೂಜಾರಿ ರಾಜ್ಯಪಾಲರ ಗಮನಕ್ಕೆ ತಂದರು.
ಈ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ರಾಜ್ಯಪಾಲರು ಪರಿಷತ್ನ ಸಭಾನಾಯಕರ ನಿಯೋಗಕ್ಕೆ ತಿಳಿಸಿದ್ದಾರೆ ಮೂಲಗಳು ತಿಳಿಸಿವೆ.
ವಿಶೇಷ ಅಧಿವೇಶನದ ಮೂಲಕ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ ಪಡೆಯಲು ಬಿಜೆಪಿ ನಾಯಕರು ಜೆಡಿಎಸ್ ನಾಯಕರ ನೆರವು ಕೇಳಿದ್ದಾರೆ ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel