ಕೊರೊನಾ ಭೀತಿಯಿಂದ ಸರ್ಕಾರಿ ನೌಕರರಿಗೆ ಮಾರ್ಚ್ 31 ರವರೆಗೂ ರಾಜ್ಯ ಸರ್ಕಾರ ರಜೆ ನೀಡಿತು. ಇದೀಗ ಆ ರಜೆ ಎಪ್ರಿಲ್ 14 ರವರೆಗೂ ಮುಂದುವರಿದಿದೆ. ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ.ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಸಾರಿಗೆ ಇಲಾಖೆ, ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಇಂಧನ ಇಲಾಖೆ, ಪಶು ವೈದ್ಯಕೀಯ ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳಿಗೆ, ನಿಗಮಗಳಿಗೆ, ಪ್ರಾಧಿಕಾರಗಳಿಗೆ ರಜೆ ಮುಂದುವರಿಸಲಾಗಿದೆ. ಈ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಗ್ರೂಪ್ ಬಿ.ಸಿ.ಡಿ ನೌಕರರಿಗೆ ಮಾರ್ಚ್ 31 ರವರೆಗೂ ರಜೆ ನೀಡಲಾಗಿತ್ತು. ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ದೇಶವನ್ನು 21 ದಿನಗಳ ಕಾಲ ಲಾಕ್ ಡೌನ್ ಮಾಡಲಾಗಿದೆ. ಹಾಗಾಗಿ ನೌಕರರಿಗೆ ನೀಡಿರುವ ರಜೆಯನ್ನು ಎಪ್ರಿಲ್ 14 ರವರೆಗೂ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...








