ಬೆಳಗಾವಿ : ರಾಜ್ಯ ಸರ್ಕಾರ ಹಣ ಖರ್ಚು ಮಾಡುವಲ್ಲಿ ಎಡವಿದೆ ಎಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಆರೋಪಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರಮೇಶ್ ಕುಮಾರ್, ರಾಜ್ಯದ ಸಿಎಂ ಅನಾರೋಗ್ಯಕ್ಕೆ ಒಳಗಾದಾಗ ಆರೋಪ ಮಾಡೋದು ಸದಾಚಾರ ಅಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಇಬ್ಬರು ಶೀಘ್ರದಲ್ಲೇ ಆರೋಗ್ಯವಾಗಲಿ ಎಂದು ಹಾರೈಸಿದರು.
ಆರಂಭದಲ್ಲಿ ಕೊರೊನಾ ವೈರಸ್ ಬಂದಾಗ ವಿಧಾನ ಮಂಡಲ ಅಧಿವೇಶನ ಮುಂದುಡಿಕೆ ಮಾಡಲಾಗಿತ್ತು. ವಿಪತ್ತು ಬಂದ ಸಂದರ್ಭದಲ್ಲಿ ನಾವು ಸರ್ಕಾರಕ್ಕೆ ಸಹಕಾರ ನೀಡಿದ್ದೇವೆ. ನಾವು ನೀಡಿದ ಸಹಕಾರ ಸರ್ಕಾರ ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ, ಸರ್ಕಾರ ಹಣ ಖರ್ಚು ಮಾಡುವಲ್ಲಿ ಎಡವಿದೆ. ಹಣದ ದುರುಪಯೋಗ ಆಗಿದೇ ಎಂದು ವಿಪಕ್ಷ ಸಿದ್ದರಾಮಯ್ಯ ಆರೋಪ ಮಾಡಿದರು. ಈ ಬಗ್ಗೆ 20 ಪತ್ರಗಳನ್ನು ವಿಪಕ್ಷ ನಾಯಕರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆರೋಪಗಳಿಗೆ ದಾಖಲೆ ಒದಗಿಸಿ ನ್ಯಾಯಾಂಗ ತನಿಖೆಗೆ ಆಗ್ರಹ ಮಾಡಲಾಗಿದೆ. ಪ್ರಜಾಪ್ರಭುತ್ವದಲ್ಲಿ ವಿಪಕ್ಷ ವಾಚ್ ಡಾಗ್ ಆಗಿ ಕೆಲಸ ಮಾಡುತ್ತಿದೆ. ಈ ಬಗ್ಗೆ ಸರ್ಕಾರ ಸೂಕ್ತ ತನಿಖೆ ಆಗಬೇಕು ಎಂದು ರಮೇಶ್ ಕುಮಾರ್ ಆಗ್ರಹಿಸಿದರು.