ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಕೊರೊನಾ ಕರಿ ನೆರಳು ಬಿದ್ದಿದೆ. ಒಂದೆಡೆ ಆರ್ಥಿಕವಾಗಿ ಸದೃಡವಾಗಲು ಸರ್ಕಾರ ಆರ್ಥಿಕ ಚಟುಟಿಕೆಗಳಿಗೆ ಚಾಲನೆ ನೀಡಿದೆ. ಜೊತೆಗೆ ಮುಖ್ಯಮಂತ್ರಿಗಳು ಪ್ರತಿನಿತ್ಯ ಅಧಿಕಾರಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಅಲ್ಲದೆ ಸಚಿವರು ಸಕ್ರಿಯವಾಗಿ ಜಿಲ್ಲೆಗಳಿಗೆ ಓಡಾಡಿ ಕೆಲಸ ಮಾಡುತ್ತಿದ್ದಾರೆ.
ಆದರೆ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅಡುಗೆ ಕೆಲಸದವರಿಗೆ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಅವರ ತಂದೆ ಮತ್ತು ಅವರ ಪತ್ನಿ ಹಾಗೂ ಮಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಸರ್ಕಾರಕ್ಕೆ ಸ್ವಲಮಟ್ಟಿನ ಆತಂಕ ಹೆಚ್ಚಾಗಿದೆ.
ಯಾಕೆಂದರೆ ಕೊರೊನಾ ಸೋಂಕು ತಗುಲಿದ್ದು ಗೊತ್ತಾಗುವವರಿಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಾಕಷ್ಟು ಅಧಿಕಾರಗಳ ಜೊತೆ ಸಭೆ ನಡೆಸಿದ್ದಾರೆ. ಸಚಿವರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಆದ್ದರಿಂದ ಸರ್ಕಾರಕ್ಕೆ ಈಗ ಕೊರೊನಾ ಸಂಕಷ್ಟ ಎದುರಾಗಿದೆ. ಇದರಿಂದ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಚಿವರಿಗೂ ಆತಂಕ ಹೆಚ್ಚಾಗಿದೆ ಎಂದು ಹೇಳಾಗುತ್ತಿದೆ. ಜೊತೆ ಸುಧಾಕರ್ ಅವರನ್ನು ಭೇಟಿ ಮಾಡಿರುವವರು ಈಗಾಗಲೇ ಕ್ವಾರಂಟೈನ್ ಆಗಿದ್ದಾರೆ.
ಒಂದು ವೇಳೆ ಕೊರೊನಾ ಸೋಂಕು ವಿಧಾನಸೌಧದಲ್ಲಿರುವವರಿಗೆ ಕಾಣಿಸಿಕೊಂಡರೆ ಸರ್ಕಾರ ಆಡಳಿತದ ಯಂತ್ರ ಸ್ಥಗಿತವಾಗುವ ಸಾದ್ಯತೆಯಿದೆ ಎಂದು ಹೇಳಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಮತ್ತೆ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.