ಬೆಂಗಳೂರು : ಹೊರ ರಾಜ್ಯದ ಹಾಗೂ ಹೊರ ಜಿಲ್ಲೆಗಳ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಮಾಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ ಅವರ ಪ್ರಯಾಣ ವೆಚ್ಚವನ್ನು ಸ್ವತಃ ಕಾರ್ಮಿಕರೇ ಭರಿಸಬೇಕೆಂದು ತೀರ್ಮಾನಿಸಿರುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಅಲ್ಲದೆ ಕಾರ್ಮಿಕರ ಪ್ರಯಾಣದ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹೊರ ರಾಜ್ಯದ ಹಾಗೂ ಹೊರ ಜಿಲ್ಲೆಗಳ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಬಸ್‌ಗಳನ್ನು ವ್ಯವಸ್ಥೆ ಮಾಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ ಪ್ರಯಾಣ ವೆಚ್ಚವನ್ನು ಸ್ವತಃ ಕಾರ್ಮಿಕರೇ ಭರಿಸಬೇಕೆಂದು ತೀರ್ಮಾನಿಸಿರುವುದು ಸರಿಯಲ್ಲ.
ಕಳೆದ 40 ದಿನಗಳಿಂದ ಕೆಲಸವಿಲ್ಲದೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟದಲ್ಲಿ ದಿನಗಳನ್ನು ಕಳೆದಿದ್ದಾರೆ. ಬಸ್ ಟಿಕೆಟ್‌ಗೆ ಹಣವೂ ಇಲ್ಲದ ಅವರ ಜೊತೆ ಅಮಾನವೀಯವಾಗಿ ವರ್ತಿಸದೆ, ಊರಿಗೆ ತೆರಳಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.