ಕೊರೊನಾ ಮೂರನೇ ಅಲೆ ಎದುರಿಸಲು ಸರ್ಕಾರ ಸಜ್ಜು : ಬಿಎಸ್ ವೈ
ಚಿತ್ರದುರ್ಗ : ಕೊರೊನಾ ಮೂರನೇ ಅಲೆ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆವರಣದಲ್ಲಿ ವೇದಾಂತ್ ಮೈನ್ಸ್ ಕಂಪನಿ ನಿರ್ಮಿಸಿರುವ 6 ಕೋಟಿ ರೂ. ವೆಚ್ಚದ ನೂರು ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಕ್ಷೇತ್ರ ಆಸ್ಪತ್ರೆಗೆ ಸಿಎಂ ವಚ್ರ್ಯುವಲ್ ಮೂಲಕ ಗುರುವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ, ಕೊರೊನಾ 3ನೇ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಸರ್ವ ಸನ್ನದ್ಧವಾಗುತ್ತಿದೆ.
ರಾಜ್ಯದಲ್ಲಿ ಆರೋಗ್ಯ ಸೌಕರ್ಯ ಸುಧಾರಿಸಲು ಸಂಘ-ಸಂಸ್ಥೆಗಳು, ವಿವಿಧ ಕಂಪನಿಗಳು ಸರ್ಕಾರದೊಂದಿಗೆ ಕೈ ಜೋಡಿಸುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಸಂಸದರಾದ ಜಿ.ಎಂ.ಸಿದ್ದೇಶ್ವರ್, ಎ.ನಾರಾಯಣಸ್ವಾಮಿ, ಶಾಸಕರಾದ ಕೆ.ಪೂರ್ಣಿಮಾ, ಟಿ.ರಘುಮೂರ್ತಿ,
ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಡಿಸಿ ಕವಿತಾ ಎಸ್.ಮನ್ನಿಕೇರಿ, ಎಸ್ಪಿ ಜಿ.ರಾಧಿಕಾ, ಜಿಪಂ ಸಿಇಒ ಡಾ.ಕೆ. ನಂದಿನಿದೇವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ನವೀನ್,
ಜಿಲ್ಲಾಧ್ಯಕ್ಷ ಎ.ಮುರುಳಿ, ಡಿಎಚ್‍ಒ ಡಾ.ಸಿ.ಎಲ್. ಫಾಲಾಕ್ಷ, ಡಿಎಸ್ ಡಾ.ಎಚ್.ಜೆ. ಬಸವರಾಜಪ್ಪ ಮತ್ತಿತರರು ಇದ್ದರು.