ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸರ್ಕಾರ ಶ್ರಮಿಸಲು ಸಿದ್ಧ : ಕೋಟಾ ಶ್ರೀನಿವಾಸ ಪೂಜಾರಿ Kota Srinivasa Poojary saaksha tv
ಬೆಳಗಾವಿ : ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸರ್ಕಾರ ಶ್ರಮಿಸಲು ಸಿದ್ದವಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಸದಸ್ಯ ಬಿ ಕೆ ಹರಿಪ್ರಸಾದ್ ಪ್ರಶ್ನೆಗೆ ಉತ್ತರಿಸಿ ಸಚಿವರು. ದೇವರಾಜ್ ಅರಸು ಸಂಶೋಧನೆ ಸಂಸ್ಥೆಗಳನ್ನು ಮುಚ್ಚುವುದಿಲ್ಲ.
ಸಂಸ್ಥೆಯನ್ನು ವ್ಯವಸ್ಥಿತವಾಗಿ ಮುನ್ನೆಡಸಲು ಸರ್ಕಾರ ಸಿದ್ಧವಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಸದಸ್ಯ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಭೂ ಒಡೆತನ ಯೋಜನೆಯಡಿ 1991 ರಿಂದ 2021ರವರೆಗೆ ಒಟ್ಟು 55 ಸಾವಿರದ 920 ಎಕರೆ ಭೂಮಿಯನ್ನು 49 ಸಾವಿರ ಫಲಾನುಭವಿಗಳಿಗೆ ಹಂಚಲಾಗಿದೆ ಎಂದು ಮಾಹಿತಿ ನೀಡಿದರು.