ಮುಷ್ಕರ ಸುಳಿವು | ಸಾರಿಗೆ ನೌಕರರಿಗೆ KSRTC BMTC ಸರ್ಕಾರ ಶಾಕ್
ಬೆಂಗಳೂರು : ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ಧರಾಗ್ತಿದ್ದಾರೆ ಎಂಬ ಸುಳಿವು ಬೆನ್ನಲ್ಲೇ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶಾಕ್ ನೀಡಿದೆ.
ಯಾವುದೇ ಕಾರಣಕ್ಕೂ ಸಾರಿಗೆ ನೌಕರರು ಮಷ್ಕರ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿದೆ.
ವಿವಿಧ ಬೇಡಿಕೆಗಳ ಈಡೇರಿಕಾಗಿ ಒತ್ತಾಯಿಸಿ ಜುಲೈ 5 ರ ನಂತ್ರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು.
ಹಿನ್ನಲೆ ಅಗತ್ಯ ಸೇವೆಗಳ ಮುಷ್ಕರವನ್ನ ನಿಷೇಧಿಸಿ ಸರ್ಕಾರ ಆದೇಶಿಸಿದೆ.
ಸದ್ಯ ಕೋವಿಡ್ ನಿಂದ ಆರ್ಥಿಕತೆಯ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ.
ಆದ್ರಿಂದ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆಯ 3 ರ ಉಪವಿಭಾಗ 1 ರ ಅನ್ವಯ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ.