ಸರ್ಕಾರದ ಕಲ್ಯಾಣ ಕಾರ್ಯಕ್ರಮ ಎಲ್ಲಾ ಜಿಲ್ಲೆಗೂ ತಲುಪಲು ಕ್ರಮ : ವಿ. ಸೋಮಣ್ಣ V Somanna
ಚಾಮರಾಜನಗರ : ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಲುಪಲು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.
ಸೋಮವಾರ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಹಿಂದುಳಿದ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಿಗೂ ತಲುಪಬೇಕು.

ಈ ನಿಟ್ಟಿನಲ್ಲಿ ತಮ್ಮ ಇಲಾಖೆಯಿಂದ ವಸತಿಹೀನರಿಗೆ ಶೇಕಡ 100 ರಷ್ಟು ವಸತಿ ನೀಡಲು ಆದ್ಯತೆ ನೀಡಲಾಗುವುದು ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ವಸತಿ ಕಲ್ಪಿಸಲಾಗುವುದು.
ಅವರ ಖಾತೆಗೆ ನೇರ ಹಣ ಜಮೆ ಮಾಡಲಾಗುವುದು ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.








