ಕೊಡಗು ಜಿಲ್ಲೆಯ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್‌ನಲ್ಲಿ ನಿರ್ಮಾಣವಾಗಬೇಕಿದ್ದ ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಮಂಥರ್ ಗೌಡ ಅವರ ಪ್ರಕಾರ, ಸಾರ್ವಜನಿಕರಿಂದ ಬಂದ ವಿರೋಧ ಹಾಗೂ ಯೋಜನೆಯ ಸುರಕ್ಷತಾ ಅಪಾಯಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇತ್ತೀಚೆಗೆ ತೋಟಗಾರಿಕೆ ಇಲಾಖೆ 15 ಕೋಟಿ ರೂ. ವೆಚ್ಚದಲ್ಲಿ ಗ್ಲಾಸ್ ಬ್ರಿಡ್ಜ್ ಹಾಗೂ ಫುಡ್ ಕೋರ್ಟ್ ನಿರ್ಮಾಣಕ್ಕಾಗಿ ಟೆಂಡರ್ ಆಹ್ವಾನಿಸಿತ್ತು. ಆದರೆ ಯೋಜನೆ ಘೋಷಣೆಯಾದ ಕೆಲವೇ ದಿನಗಳಲ್ಲಿ ಸ್ಥಳೀಯರು ಹಾಗೂ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಜನರ ಒತ್ತಾಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಯೋಜನೆ ಹಿಂಪಡೆಯುವ ಮೂಲಕ ವಿವಾದಕ್ಕೆ ತೆರೆ ಎಳೆದಿದೆ.








