ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಮಂಡನೆ ಮಾಡಿದೆ. ಈ ಕಾರಣಕ್ಕಾಗಿ ಎರಡು ಪಕ್ಷಗಳ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಸದನದಲ್ಲಿ ವಿಶ್ವಾಸ ಸಾಬೀತು ಮಾಡಬೇಕಾದ ಹಿನ್ನೆಲೆಯಲ್ಲಿ ಕಲಾಪ ಸಾಕಷ್ಟು ಕುತೂಹಲ ಮೂಡಿಸಿದೆ.
ಗುರುವಾರ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಇದಕ್ಕೆ ಕಾಂಗ್ರೆಸ್ ನ 23 ಶಾಸಕರು ಎದ್ದು ನಿಂತು ಬೆಂಬಲ ಸೂಚಿಸಿದ್ದರು.
ಹೀಗಾಗಿ ಸ್ಪೀಕರ್ ಅವರು, ಅವಿಶ್ವಾಸ ನಿರ್ಣಯ ಮಂಡನೆಗೆ ಕೋರಂ ಇದೆ ಎಂದು ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ್ದರು.
ಮಕ್ಕಳ ಲಾಲನೆ ಪಾಲನೆ ಅವಕಾಶ ವಂಚಿತರಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದ ಎಸ್ಪಿಬಿ
ಅದರಂತೆ ಇಂದು ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಯಲಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಿಎಂ ಬಿಎಸ್ ವೈ ಅವರನ್ನು ಭೇಟಿಯಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಇತ್ತ ವಿಧಾನ ಮಂಡಲ ಅಧಿವೇಶನ ಕೊನೆಯ ದಿನವಾದ ಇಂದು ವಿಧಾನ ಪರಿಷತ್ ನಲ್ಲಿ ವಿಧಾನಸಭೆಯಿಂದ ಅಂಗೀಕಾರವಾಗಿರುವ 9 ವಿಧೇಯಗಳು ಮಂಡನೆಯಾಗಲಿವೆ. ವಿಧೇಯಕಗಳ ಮೇಲೆ ಚರ್ಚೆ ನಡೆಯಲಿದೆ.