ಹಿಂದೂ ಸಮಾಜದ ರಕ್ಷಣೆ ಸರ್ಕಾರದ ಕರ್ತವ್ಯ : ಈಶ್ವರಪ್ಪ Ishwarappa saaksha tv
ಶಿವಮೊಗ್ಗ : ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿ ಬಗ್ಗೆ ಪರ ವಿರೋಧ ಮಾತುಗಳು ಕೇಳಿಬರುತ್ತಿವೆ.
ಇದರ ಬಗ್ಗೆ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಸಮಾಜವನ್ನು ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯವಾಗಿದೆ.
ಹೀಗಾಗಿ ಅಗತ್ಯ ಇರುವ ಕಾನೂನುನ್ನು ಜಾರಿಗೆ ತರುತ್ತೇವೆ. ಯಾವುದೇ ಕಾರಣಕ್ಕೂ ಮತಾಂತರ ಆಗಲು ಬಿಡೋದಿಲ್ಲ ಎಂದು ಗುಡುಗಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಈಶ್ವರಪ್ಪ, ದೇಶದಲ್ಲಿ ಧರ್ಮ,ಸಂಸ್ಕೃತಿ ಉಳಿಸುವ ಕಲ್ಪನೆ ಕಾಂಗ್ರೆಸ್ಗೆ ಇಲ್ಲ.
ಇದರಿಂದಲೇ ಕಾಂಗ್ರೆಸ್ ದಿನೇ ದಿನೆ ಕ್ಷೀಣಿಸುತ್ತಿದೆ. ಕಾಂಗ್ರೆಸ್ ಉಳಿಯಬೇಕೆಂದರೇ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರನ್ನು ತೃಪ್ತಿ ಪಡಿಸಬೇಕು.
ಇದಕ್ಕಾಗಿಯೇ ಮತಾಂತರ ಮಸೂದೆ ಮಂಡನೆಗೂ ಮುನ್ನವೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಗರಂ ಆದರು.
ಇನ್ನು ಪರಿಷತ್ ಚುನಾವಣೆ ಬಗ್ಗೆ ಮಾತನಾಡಿ, ಶಿವಮೊಗ್ಗ ಪರಿಷತ್ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ.
ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಮತ ಬರುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.









