ಬೆಂಗಳೂರು: ರಾಜ್ಯಪಾಲರು ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ 3 ವಿಧೇಯಕಗಳಿಗೆ ಮಾತ್ರ ಅಂಕಿತ ಹಾಕಿದ್ದಾರೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawarchand Gehlot) ಅವರು ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಗಳಿಗೆ ಮಾತ್ರ ಸಹಿ ಹಾಕಿದ್ದಾರೆ.
11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇನ್ನೂ 8 ವಿಧೇಯಕಗಳಿಗೆ ರಾಜ್ಯಪಾಲರ ಅನುಮೋದನೆ ಸಿಗಬೇಕಿದ್ದು, ಕಾಂಗ್ರೆಸ್ ಮತ್ತೆ ರಾಜ್ಯಪಾಲರ ನಿರ್ಧಾರಕ್ಕೆ ಕಿಡಿಕಾರುತ್ತಿದೆ.