ಬೆಂಗಳೂರು: ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚಿಸಿದ್ದಾರೆ.
ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ (Karnataka Highcourt) ನೀಡಿದ ತೀರ್ಪಿನ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಕ್ರಮಕ್ಕೆ ಸೂಚಿಸಲಾಗಿದೆ.
ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಕುರಿತು ಅಡ್ವೋಕೇಟ್ ಜನರಲ್ ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ (High Court) ಗ್ರೀನ್ ಸಿಗ್ನಲ್ ನೀಡಿದ್ದಾಗ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಜಮೀರ್, ʻನಾನು ಬಿಡಿಸಿ ಹೇಳುವಂತಿಲ್ಲ. ಅದು ಪೊಲಿಟಿಕಲ್ ಜಡ್ಜ್ಮೆಂಟ್ (Political Judgement). ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದರು. ಆನಂತರ ಅವರು ಕ್ಷಮೆ ಕೋರಿದ್ದರು.
ಜಮೀರ್ ಅವರ ಈ ಹೇಳಿಕೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದಿರುವ ರಾಜ್ಯಪಾಲರು, ಸಚಿವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.