ಕೊರೊನಾ ಬೂಸ್ಟರ್ ಡೋಸ್ ಪಡೆದ ರಾಜ್ಯಪಾಲರು

1 min read
Governor receiving Corona booster dose Saaksha_tv

ಕೊರೊನಾ ಬೂಸ್ಟರ್ ಡೋಸ್ ಪಡೆದ ರಾಜ್ಯಪಾಲರು Saaksha Tv

ಬೆಂಗಳೂರು: ಕೊರೊನಾ ಮೂರನೇ ಅಲೆಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಬೂಸ್ಟರ್ ಡೋಸ್ ಪ್ರಾರಂಭಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದ ರಾಜ್ಯಪಾಲರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆಯ ಬೂಸ್ಟರ್‌ ಡೋಸ್‌ ಪಡೆದುಕೊಂಡರು.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡೋಸ್ ಪಡೆದುಕೊಂಡು ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ಕೊರೊನಾ ಮಹಾಮಾರಿಯಿಂದ ಮುಕ್ತಿಯಾಗಲು ಲಸಿಕೆ ಅವಶ್ಯಕತೆ ಇದೆ. ಆದಕಾರಣ ರಾಜ್ಯದ ಜನ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಸಲಹೆ ನೀಡಿದರು.

ಅಲ್ಲದೇ ನಾನು ದೆಹಲಿಯಲ್ಲಿ ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದಿದ್ದೆ, ಈಗ ಬೂಸ್ಡರ್ ಡೋಸ್ ಪಡೆದಿದ್ದೇನೆ. ಪ್ರಮಾಣ ಪತ್ರವನ್ನು ನನಗೆ ನೀಡಿದ್ದಾರೆ. ಇಡೀ ದೇಶದಲ್ಲಿ ‌ಲಸಿಕೆ ಅಭಿಯಾನ ನಡೆಯುತ್ತಿದ್ದು, ಕರ್ನಾಟಕ ಅಭಿಯಾನದಲ್ಲಿ ಮುಂದಿದೆ. ಈ ಕಾರ್ಯಕ್ಕೆ ಸಿಎಂ ಹಾಗೂ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರು ಲಸಿಕೆ ಪಡೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ 4.89 ಕೋಟಿ ಜನರು ಮೊದಲ ಡೋಸ್, 3.98 ಕೋಟಿ ಜನರು ಎರಡನೇ ಡೋಸ್ ಪಡೆದಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.81.5 ಮಂದಿಗೆ ಎರಡೂ ಡೋಸ್ ನೀಡಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd