ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು ತಿಳಿದುಕೊಳ್ಳಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಭೇಟಿ ನೀಡಿದರು.
ಆಸ್ಪತ್ರೆಗೆ ಆಗಮಿಸಿದ ರಾಜ್ಯಪಾಲರು ವೈದ್ಯರೊಂದಿಗೆ ಚರ್ಚಿಸಿ, ಸುಧಾಕರ್ ಅವರ ಆರೋಗ್ಯದ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಚಿಕಿತ್ಸೆ ಪ್ರಗತಿ, ಮುಂದಿನ ಚಿಕಿತ್ಸಾ ಕ್ರಮಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ವೈದ್ಯರಿಂದ ವಿವರಗಳನ್ನು ಕೇಳಿದರು.
ನಂತರ ಸಚಿವರ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜ್ಯಪಾಲರು, ಧೈರ್ಯ ತುಂಬಿ, ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಭರವಸೆ ನೀಡಿದರು. ಅವರ ಆರೋಗ್ಯ ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದರು.
ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ, ಡಿ. ಸುಧಾಕರ್ ಅವರ ಆರೋಗ್ಯ ವಿಚಾರಿಸಿದರು. ಕುಟುಂಬಸ್ಥರೊಂದಿಗೆ ಮಾತನಾಡಿ, ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಸದ್ಯ ವೈದ್ಯರು ಸಚಿವರ ಆರೋಗ್ಯದ ಮೇಲೆ ನಿಕಟವಾಗಿ ಗಮನಹರಿಸಿದ್ದು, ಚಿಕಿತ್ಸೆ ಮುಂದುವರೆದಿದೆ.







