ಅಮರಾವತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawarchand Gehlot) ಕುಟುಂಬಸ್ಥರೊಂದಿಗೆ ತಿರುಪತಿಗೆ (Tirupati) ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.
ಆಂಧ್ರಪ್ರದೇಶದ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕುಟುಂಬ ಸಮೇತರಾಗಿ ತೆರಳಿರುವ ಅವರು, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಈ ವೇಳೆ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ಆನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು. ಕುಟುಂಬಸ್ಥರು ಈ ವೇಳೆ ಇದ್ದರು.








