ಮರಾಠರು ನಮ್ಮ ಅಣ್ಣ-ತಮ್ಮಂದಿರು : ಗೋವಿಂದ ಕಾರಜೋಳ
ಮುದ್ದೇಬಿಹಾಳ : ಮರಾಠ ಅಭಿವೃದ್ಧಿ ಪ್ರಾಧಿಕಾರ ನಿಗಮ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿವೆ.
ಈ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ರಾಜ್ಯದಲ್ಲಿರುವ ಮರಾಠರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗಿದೆಯೇ ಹೊರತು ಮರಾಠಿ ಅಭಿವೃದ್ಧಿ ನಿಗಮವಲ್ಲ ಎಂದು ತಿಳಿಸಿದ್ದಾರೆ.
ಮುದ್ದೇಬಿಹಾಳದಲ್ಲಿ ಪಟ್ಟಣದಲ್ಲಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ನಿವಾಸದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಮರಾಠರ ಸರ್ವತೋಮುಖ ಅಭಿವೃದ್ಧಿಗಾರಿ ಪ್ರಾಧಿಕಾರ ರಚನೆ ಮಾಡಲಾಗಿದೆ.
ನಾನು ಕೆಲಸ ಮಾಡಿದರೂ ನಮ್ಮ ಪಕ್ಷಕ್ಕೆ ಜನ ವೋಟು ಹಾಕ್ತಿಲ್ಲ: ಹೆಚ್ ಡಿಕೆ
ಮರಾಠ ಭಾಷೆ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಿಲ್ಲ. ಮರಾಠರು ನಮ್ಮ ಅಣ್ಣ ತಮ್ಮಂದಿರಾಗಿದ್ದಾರೆ.
ಹೀಗಾಗಿ ಕರ್ನಾಟಕ ಬಂದ್ ಅನ್ನು ವಾಪಸ್ ಪಡೆಯಬೇಕೆಂದು ಮನವಿ ಮಾಡಿಕೊಂಡರು.
ಛತ್ರಪತಿ ಶಿವಾಜಿ ಅವರು ಕರ್ನಾಟಕದವರು. ಅವರ ಮೂಲ ಪುರುಷರು ಕರ್ನಾಟಕ ಭಾಗದವರೇ ಆಗಿದ್ದಾರೆ.
ರಾಜ್ಯದಲ್ಲಿ ಮರಾಠರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ.
ಇತಿಹಾಸ ಗೊತ್ತಿಲ್ಲದವರು ಏನೇನೋ ಹೇಳುತ್ತಾರೆ ಎಂದರೆ ಅದಕ್ಕೆ ಕಿವಿಗೊಡುವುದು ಬೇಡ ಎಂದು ಡಿಸಿಎಂ ಗೋವಿಂದ ಕಾರಜೋಳ ಅವರು ಮನವಿ ಮಾಡಿಕೊಂಡರು.
ಈ ವೇಳೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಮುಖಂಡರಾದ ಎಂ.ಎಸ್. ಪಾಟೀಲ, ಮಲಕೇಂದ್ರಗೌಡ ಪಾಟೀಲ, ಹೇಮರಡ್ಡಿ ಮೇಟಿ ಇತರರು ಇದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










