ಬೆಂಗಳೂರು: ಮುಡಾ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಯ ಭೀತಿ ಎದುರಾಗಿದೆಯೇ ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಕೆಲವು ನಿರ್ಣಯಗಳೇ ಇದಕ್ಕೆ ಕಾರಣ. ಸಿಬಿಐ ತನಿಖೆ ಆತಂಕದಿಂದಲೇ ಕಾನೂನು ಕುಣಿಕೆಯಿಂದ ಪಾರಾಗಲು ಸಚಿವ ಸಂಪುಟ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಇದೇ ಕಾರಣಕ್ಕೆ ನೇರ ತನಿಖೆಗೆ ಸಿಬಿಐಗೆ ಅವಕಾಶ ದೊರೆಯದಂತೆ ಮಾಡುವುದಕ್ಕಾಗಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ದೂರುದಾರರು ಕೋರ್ಟ್ ಆದೇಶ ಪಡೆದು ನೇರವಾಗಿ ಸಿಬಿಐಗೆ ದೂರು ನೀಡಿದರೆ ತನಿಖೆ ಅಖಾಡಕ್ಕೆ ಕೇಂದ್ರ ತನಿಖಾ ಸಂಸ್ಥೆ ಧುಮುಕುವುದು ನಿಶ್ಚಿತ. ಹೀಗಾಗಿ ಸಿಬಿಐ ಮುಕ್ತ ತನಿಖೆಗೆ ಇರುವ ಅವಕಾಶವನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯಪಾಲರು ಕೇಳಿದ ಮಾಹಿತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಸಚಿವ ಸಂಪುಟದ ಗಮನಕ್ಕೆ ತರದೆ ನೀಡುವಂತಿಲ್ಲ. ಅನಿವಾರ್ಯ ಸಂದರ್ಭದಲ್ಲಿ ರಾಜ್ಯಪಾಲರ ಪ್ರಶ್ನೆಗೆ ಉತ್ತರ ನೀಡದಿರುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಿಬಿಐ ತನಿಖೆಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ.