ಶೇ.17ರಷ್ಟು ವೇತನ ಹೆಚ್ಚಳ ಹಿನ್ನಲೇ ಅನಿರ್ದಿಷ್ಟ ಮುಷ್ಕರ ಹಿಂಪಡೆದ ಸರ್ಕಾರಿ ನೌಕರರು…
ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.
ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ವಿಧಾನಸೌಧದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ, ಆದೇಶವನ್ನು ಪಡೆದುಕೊಂಡರು. ತದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನ ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು.
Govt employee strike: Govt employees called off indefinite strike after 17% pay hike…