Govt employee strike : ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಮಷ್ಕರ : ಸಿ ಎಂ ಸಂಧಾನ ಸಭೆ ವಿಫಲ….
7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ (ಎನ್’ಪಿಎಸ್) ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಗಳು ಇಂದು ಬಹುತೇಕ ಬಂದ್ ಆಗಿವೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಜತೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು. ಆದರೆ, ಈ ಸಭೆ ವಿಫಲವಾಗಿದೆ. ತಡರಾತ್ರಿವರೆಗೂ ನಡೆದ ಸರಣಿ ಸಭೆ ಬಳಿಕ ಮುಷ್ಕರಕ್ಕೆ ಕೊಟ್ಟಿರುವ ಕರೆಯನ್ನು ವಾಪಸ್ ಪಡೆಯದಿರಲು ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ.
ಇದರಿಂದ ರಾಜ್ಯದಲ್ಲಿ ಇಂದು ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್ ಆಗುವ ಸಾಧ್ಯತೆಗಳಿವೆ. ಸರ್ಕಾರದ ಭರವಸೆಯನ್ನು ನಾನು ಒಪ್ಪುವುದಿಲ್ಲ. ಅಧಿಕೃತ ಆದೇಶ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ಸರ್ಕಾರಿ ಸಿಬ್ಬಂದಿಗೆ ಸುತ್ತೋಲೆ ಕಳಿಸಲಾಗಿದ್ದು ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾದ್ರೆ ಕ್ರಮದ ಎಚ್ಚರಿಕೆ ನೀಡಲಾಗಿದೆ.
Govt employee strike : State government employees strike from today: CM negotiation meeting failed….