ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುರತ್ತಲೇ ಇರುವ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಗಳು ಸಿಗುತ್ತಿಲ್ಲವೆಂಬ ಆರೋಪಗಳು ಕೇಳಿಬಂದಿವೆ.. ಬೆಡ್ ಗಳ ಕೊರತೆಯ ದೂರಿನ ಹಿನ್ನೆ¯ ರಾಜ್ಯ ¸ರ್ಕಾರ ಇದೀಗ ಆದೇಶವೊಂದನ್ನ ಹೊರಡಿಸಿದೆ. ಈ ಆದೇಶದ ಅನ್ವಯ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಒಟ್ಟು ಬೆಡ್ ಗಳ ಮಾಹಿತಿಯನ್ನ ಆಸ್ಪತ್ರೆಯ ನೋಟೀಸ್ ಬರ‍್ಡ್ ನಲ್ಲಿ ಪ್ರರ‍್ಶಿಸಬೇಕು.
ಕೆಪಿಎಇ ಅಡಿ ನೋಂದಣಿಯಾದ ಎಲ್ಲಾ ಖಾಸಗಿ ಆಸ್ಪತ್ರೆಗಳು ಸ್ವಾಗತ ಕೌಂಟರ್ ಬಳಿ ಕೊವಿಡ್-19 ರೋಗಿಗಳಿಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ಬೋರ್ಡ್ ನಲ್ಲಿ ಆಸ್ಪತ್ರೆಯ ಹೆಸರು, ಲಭ್ಯವಿರುವ ಬೆಡ್ ಗಳ ಸಂಖ್ಯೆ ಮತ್ತು ಈಗಾಗಲೇ ಬಿಬಿಎಂಪಿ ರೆಫೆರ್ ಮಾಡಿದ ಕೊರೋನಾ ಸೋಂಕಿತರಿಗೆ ಎಷ್ಟು ಬೆಡ್ ನೀಡಲಾಗಿದೆ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಒಂದು ವೇಳೆ ಆಸ್ಪತ್ರೆ ಸಿಬ್ಬಮದಿ ಈ ನಿಯಮವನ್ನು ಪಾಲಿಸದೇ ಇದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.
ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ
ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...








