Govt hospital: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿಎಫ್ ಚಿಕಿತ್ಸೆ
ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಐವಿಎಫ್ ಚಿಕಿತ್ಸೆಯ ಕ್ಲಿನಿಕ್‌ಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ.
ಇದೇ ಮೊದಲ ಬಾರಿಗೆ ಇಂತಹ ಹೊಸದೊಂದು ನಿರ್ಧಾರಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಸರ್ಕಾರಿ ಆಸ್ಪತ್ರೆಗಳಲ್ಲಿ ಮಕ್ಕಳಿಲ್ಲದವರಿಗೆ ಐವಿಎಫ್ ಕ್ಲಿನಿಕ್ ತೆರೆಯಲು ತೀರ್ಮಾನಿಸಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಐವಿಎಫ್ ಚಿಕಿತ್ಸಾ ವೆಚ್ಚ ಅಧಿಕವಾಗಿದ್ದು, ಬಡ, ಮಧ್ಯಮ ವರ್ಗದವರಿಗೆ ಈ ಚಿಕಿತ್ಸೆಗೆ ವೆಚ್ಚ ಭರಿಸುವುದು ಸವಾಲಾಗಿ ಪರಿಣಮಿಸಿದೆ. ಹಾಗಾಗಿ ಸರ್ಕಾರಿ ವ್ಯವಸ್ಥೆಯಡಿ ಐವಿಎಫ್ ಚಿಕಿತ್ಸೆ ಆರಂಭಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಸದ್ಯಕ್ಕೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಹಾಗೂ ಕಲಬುರಗಿಯಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಐವಿಎಫ್ ಕ್ಲಿನಿಕ್‌ಗಳನ್ನು ಸ್ಥಾಪನೆ ಮಾಡುವ ಯೋಜನೆಯಿದ್ದು, ಇಲ್ಲಿ ಅತಿ ಕಡಿಮೆ ದರ ಅಥವಾ ಉಚಿತವಾಗಿ ಈ ಚಿಕಿತ್ಸೆಯನ್ನು ಒದಗಿಸಲಾಗುವುದು ಎಂದು ಸುಧಾಕರ್ ಹೇಳಿದರು.
Govt hospital: IVF treatment in state government hospitals








