ರೈಲ್ವೇ ನೇಮಕಾತಿ ಮಂಡಳಿ ಯಾವುದೇ ಫಲಿತಾಂಶ ತಡೆಹಿಡಿದಿಲ್ಲ – ಕೇಂದ್ರ ಸರ್ಕಾರ
ಪರೀಕ್ಷೆಯನ್ನು ನಡೆಸಿದ ನಂತರ ರೈಲ್ವೆ ನೇಮಕಾತಿ ಮಂಡಳಿಯಿಂದ ಯಾವುದೇ ಫಲಿತಾಂಶವನ್ನು ತಡೆಹಿಡಿಯಲಾಗಿಲ್ಲ ಎಂದು ಸರ್ಕಾರ ಹೇಳಿದೆ. ಇಂದು ರಾಜ್ಯಸಭೆಯಲ್ಲಿ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ.
ಈಗಾಗಲೇ ಒಂದು ಲಕ್ಷದ 43 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದರು. ಒಂದು ಲಕ್ಷದ 40 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪರೀಕ್ಷಾ ಹಂತದಲ್ಲಿದೆ ಎಂದು ಅವರು ಹೇಳಿದರು.
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಒಟ್ಟು ಹತ್ತು ಸಾವಿರದ 568 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ ಎಂದು ಸಚಿವರು ಹೇಳಿದರು. 2016-17 ರಿಂದ 2020-21 ರ ಅವಧಿಯಲ್ಲಿ ರೈಲ್ವೇಯಲ್ಲಿ ನೇಮಕಾತಿಗಾಗಿ ವಿವಿಧ ಗ್ರೂಪ್ ಸಿ ಮತ್ತು ಭದ್ರತೆಗೆ ಸಂಬಂಧಿಸಿದ ಹುದ್ದೆಗಳಿಗೆ ಎರಡು ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನೇಮಿಸಲಾಗಿದೆ ಎಂದು ಅವರು ಹೇಳಿದರು.