GPTSR Result : 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ…
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನ ರಾಜ್ಯ ಸರ್ಕಾರ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.
ಈ ಕುರಿತು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡಿ “15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ.” ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಕಳೆದ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿತ್ತು.
ಆದರೇ ಇಲಾಖೆ ಪ್ರಕಟಿಸಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿವಾಹಿತ ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಭ್ಯರ್ಥಿಗಳ ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್, ವಿವಾಹಿತ ಮಹಿಳೆಯರು ಸಲ್ಲಿಸಿರುವ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಆದೇಶದಲ್ಲಿ ತಿಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಹಿಂದಿನ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿತ್ತು.
GPTSR Result : Provisional selection list of 15 thousand graduate primary school teachers released…