SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, 1960ರಿಂದ ನಡೆದುಕೊಂಡು ಬಂದಿರುವ ಪದ್ಧತಿಯನ್ನು ಏಕಾಏಕಿ ಬದಲಿಸುವುದು ಸರಿಯಲ್ಲ. ದೇಶದ ಅನೇಕ ರಾಜ್ಯಗಳಲ್ಲಿ ಇಂಗ್ಲಿಷ್ ಹೊರತುಪಡಿಸಿದರೆ ಹಿಂದಿಯೇ ಹೆಚ್ಚು ಬಳಕೆಯಲ್ಲಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ನಿರ್ಧಾರ ಸರಿಯಾದುದಲ್ಲ ಎಂದು ಹೇಳಿದ್ದಾರೆ.
ಇದಲ್ಲದೆ, ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಮುಖ್ಯಮಂತ್ರಿಗಳ ಮೇಲೆ ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.
ಈ ವಿವಾದಾತ್ಮಕ ಬದಲಾವಣೆ SSLC ಪರೀಕ್ಷಾ ವ್ಯವಸ್ಥೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಶಿಕ್ಷಣ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.







