ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳು ಓಪನ್ Colleges
ನವದೆಹಲಿ : ಅಕ್ಟೋಬರ್ 1 ರಿಂದ ಪದವಿ ಕಾಲೇಜುಗಳನ್ನು ತೆರೆಯಲು ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.
ಈ ಬಗ್ಗೆ ಮಾರ್ಗಸೂಚಿ ಹೊರಡಿಸಿರುವ ಯುಜಿಸಿ, ಸೆಪ್ಟೆಂಬರ್ ತಿಂಗಳ 30ನೇ ತಾರೀಖಿನೊಳಗೆ 2021-22ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಸಿ, ಅಕ್ಟೋಬರ್? 1ರಿಂದ ಕಾಲೇಜುಗಳನ್ನು ಪುನಾರಂಭಿಸಿ ಎಂದು ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.
ಅಲ್ಲದೆ, ದಾಖಲಾತಿಗೆ ನೀಡಲಾದ ಗಡುವನ್ನು ಅಕ್ಟೋಬರ್ 31, 2021 ರವರೆಗೆ ವಿಸ್ತರಿಸಿದ್ದು, ಅರ್ಹತಾ ಪರೀಕ್ಷೆ ಸಂಬಂಧಿತ ದಾಖಲೆಗಳನ್ನು ನೀಡಲು ಡಿಸೆಂಬರ್ 31, 2021 ರವರೆಗೆ ಕಾಲಾವಕಾಶ ನೀಡಿದೆ. ಜೊತೆಗೆ ತರಗತಿಯು ಆನ್ ಲೈನ್, ಆಫ್ ಲೈನ್ ನಲ್ಲಿ ನಡೆಸಬಹುದು ಎಂದು ಯುಜಿಸಿ ಹೇಳಿದೆ.