ಕೊರೊನಾ ಹಿನ್ನೆಲೆ ಮುಂದೂಡಲಾಗಿದ್ದ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಅಕ್ಟೋಬರ್ ನಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಕೊರೊನಾ ನಿರ್ವಹಣೆ, ಲಾಕ್ ಡೌನ್ ನೀತಿ ನಿಯಮಗಳೆ ಚುನಾವಣೆಯ ಪ್ರಮುಖ ವಿಷಯಗಳಾಗಿವೆ.
ಅಂದಹಾಗೆ ಅವಧಿ ಮುಗಿದಿರುವ ರಾಜ್ಯದ 5800 ಗ್ರಾಮ ಪಂಚಾಯಿತಿಗಳಿಗೆ ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಇದಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ವಿಪಕ್ಷಗಳ ಒತ್ತಡಕ್ಕೆ ಮಣಿದ ಸರ್ಕಾರ ನಾಮ ನಿರ್ದೇಶಿತ ಸದಸ್ಯರ ನೇಮಕದ ಬದಲಿಗೆ ಆಡಳಿತಾಧಿಕಾರಿಗಳ ನೇಮಕ ಮಾಡಿತ್ತು.
ಇದರ ಮಧ್ಯೆ ಪಂಚಾಯತ್ ರಾಜ್ ಅಧಿನಿಯಮದಂತೆ ಕಾಲಕಾಲಕ್ಕೆ ಚುನಾವಣೆ ನಡೆಯಲೇ ಬೇಕೆಂದು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.
ಈ ಹಿನ್ನೆಲೆ ಚುನಾವಣೆ ನಡೆಸುವ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣೆ ಆಯೋಗ ಸೂಚಿಸಿತ್ತು. ಇದೀಗ ಎಲ್ಲಾ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸುವ ಬಗ್ಗೆ ಆಯೋಗಕ್ಕೆ ಅಭಿಪ್ರಾಯಗಳನ್ನು ತಿಳಿಸಿತ್ತು. ಜೂನ್ 24 ರಂದು ನಡೆದ ಸಭೆಯಲ್ಲಿ ಆಯೋಗಕ್ಕೆ ಜಿಲ್ಲಾಧಿಕಾರಿಗಳು ತಮ್ಮ ಅಭಿಪ್ರಾಯವನ್ನು ತಿಳಿಸಿದಾರೆ. ಅದರಂತೆ ಚುನಾವಣೆ ಆಯೋಗ ಅಕ್ಟೋಬರ್ ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ಹೈ ಕೋರ್ಟ್ ಗಮನಕ್ಕೆ ತಂದಿದೆ.
ನಂದಿನಿ ಹಾಲಿನ ದರ ಏರಿಕೆ :KMF ಅಧ್ಯಕ್ಷರ ಸ್ಪಷ್ಟನೆ
KMF (ಕರ್ನಾಟಕ ಹಾಲು ಒಕ್ಕೂಟ) ಅಧ್ಯಕ್ಷ ಭೀಮಾ ನಾಯ್ಕ ಅವರು, ಸದ್ಯಕ್ಕೆ ನಂದಿನಿ ಹಾಲಿನ ದರದಲ್ಲಿ ಯಾವುದೇ ಏರಿಕೆ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ...