3 ವಾರದೊಳಗೆ ಗ್ರಾಮಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ
ಬೆಂಗಳೂರು : ಮೂರು ವಾರದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾತಿಯಿಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅವಧಿ ಪೂರ್ಣಗೊಂಡ ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಹಾಗೂ ಇತರರು ಹೈಕೊರ್ಟ್ಗೆ ಅರ್ಜಿಸಲ್ಲಿಕೆ ಮಾಡಿದ್ದರು.
ಶುಕ್ರವಾರ ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಮೂರು ವಾರದೊಳಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ನಿರ್ದೇಶಿಸಿದೆ.
ಅಲ್ಲದೆ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸುವ ಸಾಂವಿಧಾನಿಕ ಆದೇಶವನ್ನು ಪಾಲಿಸುವ ಸ್ವತಂತ್ರ ಸಂಸ್ಥೆಯಾಗಿದೆ.
ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಅನ್ನದಾತ ಸಜ್ಜು
ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರವು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸಿಬ್ಬಂದಿಯ ಅಗತ್ಯವಿದ್ದರೆ ಚುನಾವಣಾ ಆಯೋಗ ರಾಜ್ಯಪಾಲರನ್ನು ಸಂಪರ್ಕಿಸಬಹುದು. ಆದರೆ ರಾಜ್ಯ ಸರ್ಕಾರವನ್ನಲ್ಲ ಎಂದು ಹೈಕೋರ್ಟ್ ಹೇಳಿದೆ.
ಅಸಾಧಾರಣ ಸಂದರ್ಭದಲ್ಲಷ್ಟೇ ಚುನಾವಣೆ ಮುಂದೂಡಬಹುದು. ಆದ್ರೆ, ಅದನ್ನ ಆಯೋಗ ತೀರ್ಮಾನಿಸಬೇಕು. ಚುನಾವಣೆ ಮುಂದೂಡಿಕೆ ಸರ್ಕಾರ ನಿರ್ಧರಿಸುವಂತಿಲ್ಲ ಎಂದು ಕೂಡ ಕೋರ್ಟ್ ಸ್ಪಷ್ಟಪಡಿಸಿದೆ.
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel