ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಂಟರ ಸಂಘದ RNS ವಿದ್ಯಾನಿಕೇತನ-2 ಭವ್ಯ ನೂತನ ಶಾಲಾ ಸಂಕೀರ್ಣದ ಅದ್ಧೂರಿ ಉದ್ಘಾಟನಾ ಸಮಾರಂಭ

Mahesh M Dhandu by Mahesh M Dhandu
July 24, 2022
in Newsbeat, State, ರಾಜ್ಯ
Bangalore Thawar Chand Gehlot on new education policy saaksha tv

Bangalore Thawar Chand Gehlot on new education policy saaksha tv

Share on FacebookShare on TwitterShare on WhatsappShare on Telegram

ಬಂಟರ ಸಂಘದ RNS ವಿದ್ಯಾನಿಕೇತನ-2 ಭವ್ಯ ನೂತನ ಶಾಲಾ ಸಂಕೀರ್ಣದ ಅದ್ಧೂರಿ ಉದ್ಘಾಟನಾ ಸಮಾರಂಭ

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕು, ತಾವರೆಕೆರೆ ಹೋಬಳಿಯ ಯಲಚಗುಪ್ಪೆ ಗ್ರಾಮದಲ್ಲಿ ಬಂಟರ ಸಂಘದ ಬಿ.ಎಸ್‌.ಆರ್‌.ಎನ್‌.ಎಸ್‌ ವಿದ್ಯಾನಿಕೇತ-2 ನೂತನ ಶಾಲಾ ಕಟ್ಟಡದ ಸಂಕೀರ್ಣ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ನೂತನ ಶಾಲಾ ಕಟ್ಟಡವನ್ನು ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

Related posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026

ಆರ್ ಎನ್ ಎಸ್ ವಿದ್ಯಾನಿಕೇತನ ಸಂಸ್ಥೆಯ ಶಾಲಾ ಸಂಕೀರ್ಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಘನತೆವೆತ್ತ  ರಾಜ್ಯಪಾಲರಾದ ಸನ್ಮಾನ್ಯ ತಾವರ್ ಚಂದ್ ಗೆಹ್ಲೋಟ್, ಈ ವಿದ್ಯಾಸಂಸ್ಥೆ ಒಂಬತ್ತು ಎಕರೆ ವಿಸ್ತೀರ್ಣದಲ್ಲಿ ಅದ್ಭುತ ವ್ಯವಸ್ಥೆಯ ಶೈಕ್ಷಣಿಕ ಸಂಕೀರ್ಣ ನಿರ್ಮಾಣ ಮಾಡಿದೆ. ನಗರದ ಜಂಜಾಟಗಳಿಂದ ದೂರವಿರುವ ಈ ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಅನುಕೂಲಕರ ಪ್ರಶಾಂತ ವಾತಾವರಣ ಸೃಷ್ಟಿಸಿಕೊಟ್ಟಿದೆ. ಇಂತದ್ದೊಂದು ಪ್ರಯತ್ನ ಮಾಡಿರುವ ಈ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಗೆ ನಾನು ಅಭಿನಂದನೆ ತಿಳಿಸುತ್ತೇನೆ ಎಂದರು.

ಈ ವಿದ್ಯಾಸಂಸ್ಥೆ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡುವಂತಾಗಲಿ ಎಂದು ನಾನು ಬಯಸುತ್ತೇನೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಬಲಾಢ್ಯರಾಗುತ್ತಾರೆ. ವಿದ್ಯಾರ್ಥಿಗಳು ಈ ದೇಶದ ಭವಿಷ್ಯ. ದೇಶದ ಉನ್ನತಿಗೆ ಹೆಚ್ಚಿನ ಮಹತ್ವಪೂರ್ಣ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ ಅಪ್ ಎಂಡ್ ಸ್ಟ್ಯಾಂಡ್ ಅಪ್ ಮುಂತಾದ ಮಹತ್ವದ ಯೋಜನೆಗಳ ಸಹಾಯದಿಂದ ವಿದ್ಯಾರ್ಥಿಗಳು ಶಕ್ತಿಶಾಲಿ ಭಾರತವನ್ನು ಕಟ್ಟಲು ಸಾಧ್ಯವಿದೆ. ಇದರ ಒಟ್ಟು ಫಲಿತಾಂಶವೇ ಆತ್ಮನಿರ್ಭರ ಭಾರತ. ಭವಿಷ್ಯದಲ್ಲಿ ಉದ್ಯೋಗ ಸೃಷ್ಠಿ, ಮಹಿಳಾ ಸಶಕ್ತಿಕರಣ ಹಾಗೂ ಪರಸ್ಪರ ಸಹಭಾಗಿತ್ವದ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ವಿದ್ಯಾರ್ಥಿಗಳ ನೀಡಬೇಕಿರುವ ಕೊಡುಗೆ ಗಮನಾರ್ಹವಾದುದ್ದು ಎಂದರು.

ಹೊಸ ಶಿಕ್ಷಣ ವ್ಯವಸ್ಥೆಯಲ್ಲಿ ಆಧುನಿಕ ಶಿಕ್ಷಣದ ಜೊತೆ ನಮ್ಮ ಪಾರಂಪರಿಕ ಪ್ರತಿಭೆ–ಕೌಶಲ್ಯಗಳೂ ನಿರ್ಣಾಯಕ ಪಾತ್ರ ವಹಿಸುತ್ತವೆ. ಹೊಸ ಶಿಕ್ಷಣ ನೀತಿಯ ಸಹಾಯದಿಂದ ನಮ್ಮ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆ ದೊರಕಲಿದೆ. ಬಂಟ ಸಂಘದ ಆರ್ ಎನ್ ಎಸ್ ವಿದ್ಯಾನಿಕೇತನ ಸಂಸ್ಥೆಯೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ ಎಂಬ ನಂಬಿಕೆ ನನಗಿದೆ ಎಂದು ಗೌರವಾನ್ವಿತ ರಾಜ್ಯಪಾಲರು ಭರವಸೆ ವ್ಯಕ್ತಪಡಿಸಿದರು‌.

ಬಳಿಕ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಯವರು ಮಾತನಾಡಿ, ದೇಶದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಶಿಕ್ಷಣಸಂಸ್ಥೆಗಳು ದೇಶದ ಪ್ರಗತಿಯ ಮಾಧ್ಯಮವಾಗಿದೆ. ಯಾರು ಅಕ್ಷರದಿಂದ ದೂರ ಆಗಿರುತ್ತಾರೆ, ಅವರು ಲೋಕ ಕಂಟಕರಾಗಿ ಜನರನ್ನು ಪೀಡಿಸುತ್ತಾರೆ. ಹೀಗಾಗಿ ದೇಶದ ಉನ್ನತಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು. ಅಂಥಹ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಶಿಕ್ಷಣ ಸಂಸ್ಥೆಗಳ ಹೆಸರಲ್ಲಿ  ಹಣವನ್ನ ಗಳಿಸುವ ಶಿಕ್ಷಣ ಸಂಸ್ಥೆಗಳಿದ್ದಾವೆ.   ಜೊತೆಗೆ ಶಿಕ್ಷಣ ಸಂಸ್ಥೆಯನ್ನ ತೆಗೆದು ಹಿಡನ್ ಅಜೆಂಡ್ ಇಟ್ಟುಕೊಂಡು ಸಮಾಜಕಕ್ಕೆ ಕಂಟಕವಾಗುವಂತ ಸಂಸ್ಥೆಗಳಿದ್ದಾವೆ. ಆದರೆ ಶಿಕ್ಷಣ ಸಂಸ್ಥೆಗಳು  ಹೇಗಿರಬೇಕು  ಅಂದರೆ, ಜಗತ್ತಿನ  ಸಮಾಜದ ಉನ್ನತಿಗೆ  ಉತ್ತಮವಾದ ವ್ಯಕ್ತಿತ್ವನ್ನ ರೂಪಿಸುವಂತೆ ಇರಬೇಕು. ಅಂಥಹ ಶಿಕ್ಷಣ ನೀಡುವ ನಿಟ್ಟಿನಲ್ಲಿ ಬೆಂಗಳೂರು ಬಂಟ ಸಂಘದ ಮೊದಲನೆ ಘಟಕ ಬೆಳದು ನಿಂತಿದೆ. ಅದರ ಭಾಗವಾಗಿ ಇಂದು ಎರಡನೇ ಘಟಕ ಲೋಕಾರ್ಪಣೆಗೊಂಡಿದೆ. ಶಿಕ್ಷಣ ಸಂಸ್ಥೆ ಬೆಳೆದು ನಿಂತರೇ ಲೋಕಕ್ಕೆ ಉತ್ತಮ ಪೌರರನ್ನ ಕೊಡುಗೆಯಾಗಿ ನೀಡುತ್ತದೆ.  ದಕ್ಷಿಣ ಕನ್ನಡ ಭಾಗದಲ್ಲಿ ಬಂಟ ಸಮುದಾಯದವರು ಕೃಷಿಯನ್ನ ಪ್ರಧಾನವಾಗಿಟ್ಟುಕೊಂಡವರು. ಕೃಷಿ ಕ್ಷೇತ್ರದಿಂದ  ದೇಶಕ್ಕೆ ಅನ್ನದಾತರಾಗಿ ಬೆಳೆದಂತಹ ಈ ಸಮುದಾಯ, ಇಂದು ಶಿಕ್ಷಣ ಕ್ಷೇತ್ರದಲ್ಲಿ ಹೆಜ್ಜೆ ಇಡುತ್ತಿದೆ.  ಅದೇ ರೀತಿ ಈ ಶಿಕ್ಷಣ ಸಂಸ್ಥೆ ರಾಜ್ಯಕ್ಕೆ ದೇಶಕ್ಕೆ ಅಷ್ಟೆ ಅಲ್ಲದೆ ಇಡೀ ವಿಶ್ವಕ್ಕೆ ಮಾದರಿಯಾಗಿ  ಬೆಳಿಯಲಿ ಎಂದು ಆಶೀರ್ವದಿಸಿದರು.

Grand Inauguration Ceremony of Bantar Sangh BSRNS Vidyaniketan-2 Grand New School Complex saaksha tv
Grand Inauguration Ceremony of Bantar Sangh BSRNS Vidyaniketan-2 Grand New School Complex saaksha tv

ಇನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಈ ಮಾತನಾಡಿ, ಶಿಕ್ಷಣ  ಅನ್ನೋದು ಬದುಕನ್ನ ಬದಲಾಯಿಸುವಂತಹ ಸಾಧನ. ಬಂಟರ ಸಂಘ ತಾನು ಮಾಡುತ್ತಿರುವ ಹತ್ತಾರು ಕಾರ್ಯಗಳ ನಡುವೆ ಶಿಕ್ಷಣ ಕ್ಷೇತ್ರವನ್ನ  ಆದ್ಯತೆಯಾಗಿ ತೆಗೆದುಕೊಂಡು ಸಮಾಜದಲ್ಲಿ ಶಕ್ತಿ ತುಂಬುವ ಕೆಲಸ ಮಾಡುತ್ತಿರುವುದಕ್ಕೋಸ್ಕರ  ನಾನು ವಿಶೇಷವಾದತಂಹ ಧನ್ಯವಾದ ತಿಳಿಸೋಕೆ ಬಯಸುತ್ತೇನೆ. ಶಿಕ್ಷಣವನ್ನ  ಬಿಟ್ಟು ದೇಶ  ಕಟ್ಟೋಕೆ ಸಾಧ್ಯ ಇಲ್ಲ. ದುರ್ದೈವದ ಸಂಗತಿ ಹತ್ತಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸುಸಂಸ್ಕೃತ ಸಭ್ಯ ರಾಷ್ಟ್ರವಾಗಿದ್ದ ಭಾರತವನ್ನ ಪರಕೀಯರ ಆಕ್ರಮಣದಿಂದ ನಮ್ಮ ಸಂಪತ್ತನ್ನ ಕಳೆದುಕೊಂಡ್ವಿ, ನಮ್ಮ ಸಭ್ಯತೆಯನ್ನ ಕಳೆದುಕೊಂಡ್ವಿ, ನಮಗೆ ನಮ್ಮತನದ ಬಗ್ಗೆಯೆ ಅರಿವಿಲ್ಲದಂತಹ ಮೆಕಾಲೆ ಶಿಕ್ಷಣವನ್ನ ತಂದ್ರು ಅರ್ಧ ಸತ್ಯವನ್ನ ನಮಗೆ ಬೊಧಿಸಿದ್ರು. ನಮ್ಮ ಶೌರ್ಯದ ಸಾಹಸದ ವಿಷಯವನ್ನ ಮರೆಮಾಚಿದ್ರು.  ನಮ್ಮದು ಕೇವಲ ಸೋಲಿನ  ಇತಿಹಾಸ, ಹೊರಗಿನವರೇ ಬಂದು ಆಳಿದ್ದಾರೆ. ಆಳುವ ಸಾಮರ್ಥ್ಯ ಇಲ್ಲದ ಭಾರತೀಯರು, ಆಳಿಸಿಕೊಳ್ಳಲು ಮಾತ್ರ ನಿಮಗೆ ಗೊತ್ತಿರೋದು. ಆಳುವ ಸಾಮರ್ಥ್ಯ  ಇಲ್ಲ ಅನ್ನೋದನ್ನ ನಮ್ಮ ತಲೆಗೆ ತುಂಬಿದ್ರು ನಾವು ಅದನ್ನೇ ಸತ್ಯ ಎಂದು ನಂಬಿದ್ವಿ. ವಾಸ್ತವಿಕ ಸತ್ಯ ಬೇರೆನೇ ಇತ್ತು. ಆದ್ರೆ ಭಾರತ ಈಗ ಬದಲಾಗುತ್ತಿದೆ. ಶಿಕ್ಷಣದ ಮೂಲಕ ಭಾರತವನ್ನ ಮತ್ತೆ ಕಟ್ಟಬೇಕು ಅನ್ನುವಂತಹ ಸಂಕಲ್ಪದೊಂದಿಗೆ ನಾವು ಜಗತ್ತಿನ ಸವಾಲನ್ನ  ಎದುರಿಸುವುದಕ್ಕೆ ತಯಾರಾಗಿದ್ದೇವೆ.  ಇಂಥ ಸಂದರ್ಭದಲ್ಲಿ   RNS ವಿದ್ಯಾನಿಕೇತನ ಸಂಸ್ಥೆ  ಕೇವಲ ಶಿಕ್ಷಣ ಮಾತ್ರ ಕೊಡೋದಲ್ಲ. ಶೀಲವಿತ್ತವಾದ ಶಿಕ್ಷಣವನ್ನ ಕೊಡಬೇಕು, ಚಾರಿತ್ರ್ಯವಂತ ಸಮಾಜವನ್ನ ನಿರ್ಮಾಣ ಮಾಡುವುದಕ್ಕೆ ಬೇಕಾದಂತಹ ಶಿಕ್ಷಣವನ್ನ ನೀಡಬೇಕು.  ಯಾಕೆ ಅಂದ್ರೆ ಭಾರತೀಯರು ಗೌರವಿಸಿದ್ದು ಪೂಜಿಸಿದ್ದು ಸಂಪತ್ತನ್ನಲ್ಲ, ಚಾರಿತ್ರ್ಯವಂತರನ್ನ, ಶೀಲವನ್ನ  ತ್ಯಾಗವನ್ನ  ಸೇವೆಯನ್ನ. ಈ ರೀತಿಯ ಮನೋಭಾವೆನೆಯನ್ನ  ಬೆಳೆಸುವಂತಹ ಶಿಕ್ಷಣವನ್ನ ನೀಡಬೇಕು ಎಂದು ಮನವಿ ಮಾಡಿಕೊಂಡರು..

ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಲೋಕಾಯುಕ್ತ ಜಸ್ಟೀಸ್ ಪಿ. ವಿಶ್ವನಾಥ ಶೆಟ್ಟಿ, ಬಿ.ಎಸ್.ಆರ್.ಎನ್.ಎಸ್  ವಿದ್ಯಾನಿಕೇತನದ ಆಡಳಿತ ಮಂಡಳಿ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ, ಗೌರವ ಆತಿಥಿಗಳಾಗಿ ಬೆಂಗಳೂರು ವಿವಿ ಉಪಕುಲಪತಿ ಡಾ. ಜಯಕರ ಶೆಟ್ಟಿ ಎಂ, ಉದ್ಯಮಿ ಶಶಿಕಿರಣ್ ಶೆಟ್ಟಿ, ಹಾಗೂ ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಉಪಸ್ಥಿತರಿದ್ದರು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೇಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇನ್ನು ಬಿ.ಎಸ್‌.ಆರ್‌.ಎನ್‌.ಎಸ್‌ ವಿದ್ಯಾನಿಕೇತನ-2 ನೂತನ ಸುವ್ಯವಸ್ಥಿತ ಶಾಲಾ ಸಂಕೀರ್ಣ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಯಲಚುಗುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗಿದ್ದು, ಸುಮಾರು 9 ಎಕರೆ 18.5 ಗುಂಟೆ ವಿಸ್ತಾರದಲ್ಲಿ ಹರಡಿಕೊಂಡಿರುವ ಭವ್ಯ ಕಟ್ಟಡ ಸಮುಚ್ಛಯ ಹೊಂದಿದೆ. ಸುಮಾರು 55 ಕೋಟಿಗೂ ಹೆಚ್ಚಿನ ಮೊತ್ತದಲ್ಲಿ ನಿರ್ಮಾಣವಾದ ಅತ್ಯಾದುನಿಕ ಕ್ಯಾಂಪಸ್‌ ನಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ಅಳವಡಿಸಲಾಗಿದೆ. ಸದ್ಯ ಮಕ್ಕಳ ಮಾಂಟೇಸ್ಸರಿ ತರಗತಿಗಳಿಂದ ಆರನೇ ತರಗತಿಯವರೆಗೆ ಕಲಿಕೆ ನಡೆಯುತ್ತಿದ್ದು, ಪದವಿ ಪೂರ್ವ ಕಾಲೇಜು ಸಹ ಕಾರ್ಯಾಚರಣೆ ನಡೆಸುತ್ತಿದೆ. ಬಿಎಸ್‌ಆರ್‌ಎನ್‌ಎಸ್‌ ವಿದ್ಯಾನಿಕೇತನ ಸಂಸ್ಥೆಯಲ್ಲಿ ಮಾಂಟೇಸ್ಸರಿಯಿಂದ 6ನೇ ತರಗತಿಯವರೆಗೆ ಒಟ್ಟು 797 ಪ್ರಾಥಮಿಕ ಹಂತದ ವಿದ್ಯಾರ್ಥಿಗಳು, 188 ಪದವಿ ಪೂರ್ವ ವಿದ್ಯಾರ್ಥಿಗಳು ಕಲಿಯುತ್ತಿದ್ದು, ಇಲ್ಲಿನ ಸುವ್ಯವಸ್ಥಿತ ಹಾಸ್ಟೆಲ್‌ ನಲ್ಲಿ 60 ವಿದ್ಯಾರ್ಥಿಗಳಿದ್ದಾರೆ.

ಸಂಸ್ಥೆಯ ಕ್ಯಾಂಪಸ್‌ ನಲ್ಲಿ ಕಿಂಡರ್‌ ಗಾರ್ಡನ್‌, ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಹಂತದ ತರಗತಿಗಳು, ಪ್ರೌಢಶಾಲಾ ತರಗತಿಗಳ ವಿಭಾಗ, ಪಿಯೂಸಿ ತರಗತಿಗಳು, ಬಾಲಕ ಮತ್ತು ಬಾಲಕಿಯರ ಪ್ರತ್ಯೇಕ ಹಾಸ್ಟೆಲ್‌ ವ್ಯವಸ್ಥೆ, ಡಿಜಿಟಲ್‌ ಲೈಬ್ರರಿ, ಎಲ್ಲಾ ವಿಭಾಗಗಳ ವಿಶಿಷ್ಟ ಲ್ಯಾಬ್‌, ಭವ್ಯವಾದ ಆಡಿಟೋರಿಯಂ, ಕ್ಲಾಕ್‌ ಟವರ್‌, ಫುಟ್‌ ಬಾಲ್‌ ಮೈದಾನ, ಅಚ್ಚುಕಟ್ಟಾದ ಪಾರ್ಕಿಂಗ್‌ ವ್ಯವಸ್ಥೆ, ವಿವಿಧ ಆಟೋಟಗಳ ಮೈದಾನ ಮುಂತಾದವುಗಳನ್ನು ಹೊಂದಿದೆ. ಹುಡುಗರ ವಸತಿ ನಿಲಯದಲ್ಲಿ 300 ಬಾಲಕರ ಸಾಮರ್ಥ್ಯದ ಒಟ್ಟು 50 ಕೋಣೆಗಳಿವೆ. ಬಾಲಕಿಯರ ವಸತಿ ನಿಲಯದಲ್ಲಿ 144 ವಿದ್ಯಾರ್ಥಿನಿಯರ ಸಾಮರ್ಥ್ಯದ 24 ಕೋಣೆಗಳಿವೆ.

Tags: #Saaksha TVbangalorebanta sanghaC T Ravi
ShareTweetSendShare
Join us on:

Related Posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram