ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ Saaksha Tv
ರಾಯಚೂರು: ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಮರಳಿದ ವೀರಯೋಧನನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿರುವ ಪ್ರಸಂಗ ಲಿಂಗಸುಗೂರು ತಾಲೂಕಿನ ಮಟ್ಟೂರು ಗ್ರಾಮದಲ್ಲಿ ನಡೆದಿದೆ .
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಟ್ಟೂರು ಗ್ರಾಮದ ಪಂಪಣ್ಣ.ಎ.ಜಾವೂರು, ಇವರು 34 ವರ್ಷಗಳ ಕಾಲ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಸೇನಾ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದಾಗ ಗ್ರಾಮಸ್ಥರು ವೀರಯೋಧನನ್ನು ಅದ್ಧರೂರಿಯಾಗಿ ಸ್ವಾಗತಿಸಿದ್ದಾರೆ.
ವೀರ ಯೋಧನನ್ನು ಕುದುರೆ ಮೇಲೆ ಗ್ರಾಮದ ಪ್ರಮುಖ ಬಡಾವಣೆಗಳ ರಸ್ತೆ ಮೇಲೆ ಬ್ಯಾಂಡ್ ಮೇಳದೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ಮಾಡಿದ್ದಾರೆ, ಗ್ರಾಮಸ್ಥರು ಕುಣಿದು, ಕುಪ್ಪಳಿಸಿ, ನಂತರ ಕಾರ್ಯಕ್ರಮ ಆಯೋಜಿಸಿ ಯೋಧನನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಾಣವನ್ನೂ ಲೆಕ್ಕಿಸದೆ ಕಳೆದ 34 ವರ್ಷಗಳಿಂದ ದೇಶ ಸೇವೆ ಸಲ್ಲಿಸಿ ತವರಿಗೆ ಮರಳಿದ ಯೋಧನನ್ನು ಬಾರಮಾಡಿಕೊಳ್ಳಲು ಇಡೀ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.








