ಉದ್ಯೋಗಾಕಾಂಕ್ಷಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸದ್ಯದಲ್ಲಿಯೇ 660 ಪಿಡಿಒ, 604 ಗ್ರೇಡ್ 1 ಕಾರ್ಯದರ್ಶಿ ಹಾಗೂ 719 ಗ್ರೇಡ್ -2 ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಗ್ರಾಪಂಗಳಲ್ಲಿ ಖಾಲಿ ಇರುವ 660 ಪಿಡಿಒ, 604 ಗ್ರೇಡ್ 1 ಹಾಗೂ 719 ಗ್ರೇಡ್ 2 ಕಾಯ್ದರ್ಶಿ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 150 ಪಿಡಿಒಗಳ ನೇಮಕಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಇನ್ನುಳಿದ 510 ಪಿಡಿಒಗಳ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೇ, ಬೇರೆ ಇಲಾಖೆಗಳಲ್ಲಿ ಹಾಗೂ ಸ್ಥಳಗಳಿಗೆ ಯೋಜನೆ ಮೇಲೆ ನೇಮಕವಾಗಿರುವ ಗ್ರಾಪಂ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಅಧಿಕಾರಿಗಳನ್ನು ಮರಳಿ ಮಾತೃ ಇಲಾಖೆಗೆ ಕರೆಯಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.