ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ಸಂಬಂಧಿಸಿದ ಪರಿಶೀಲನಾ ವರದಿಯನ್ನು ನಿನ್ನೆ ವಿಧಾನಸೌಧದಲ್ಲಿ ವಿಧಾನಸಭೆಯ ಜಂಟಿ ಪರಿಶೀಲನಾ ಸಮಿತಿಯ ಅಧ್ಯಕ್ಷ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸಲ್ಲಿಸಲಾಯಿತು.
ಈ ವರದಿಯಲ್ಲಿ, ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) 7 ಹೊಸ ಮಹಾನಗರ ಪಾಲಿಕೆಗಳಾಗಿ ವಿಂಗಡಿಸುವ ಮತ್ತು ಪ್ರತಿ ಪಾಲಿಕೆಗೆ 100-125 ವಾರ್ಡ್‌ಗಳನ್ನು ಹೊಂದಿಸುವ ಶಿಫಾರಸು ಮಾಡಲಾಗಿದೆ.
ಇದೇ ಬಜೆಟ್ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ.








