ಮಾಹಾ-ಗೋವಾ ಗಡಿಯಲ್ಲಿ ಕಟ್ಟೆಚ್ಚರ Saaksha Tv
ಬೆಳಗಾವಿ: ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ, ಇದರಲ್ಲಿ ಮಹಾರಾಷ್ಟ್ರದ ಪ್ರಕರಣಗಳು ಜಾಸ್ತಿ ಇದೆ. ಮಹಾರಾಷ್ಟ್ರದಲ್ಲಿ ದಿನೇ ದಿನೇ ಪ್ರರಕರಣಗಳು ಹೆಚ್ಚುತ್ತಿದ್ದು ಗಡಿನಾಡು ಬೆಳಗಾವಿಯಲ್ಲಿ ಆತಂಕ ಹೆಚ್ಚಿದೆ. ಹೀಗಾಗಿ ಮಹಾರಾಷ್ಟ್ರ ಕರ್ನಾಟಕ ಗಡಿ ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ಅಲ್ಲದೇ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಜನರ ಮೇಲೆ ನಿಗಾ ಇರಿಸಲಾಗಿದೆ. ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಸದ್ಯ ಬೆಳಗಾವಿ ಜಿಲ್ಲೆಯಲ್ಲಿ 183 ಪಾಸಿಟಿವ್ ಕೇಸ್ ದಾಖಲಾಗಿದ್ದು ಇದು ಹೆಚ್ಚಾಗದಂತೆ ಗಡಿಯಲ್ಲಿ ಕಠಿಣ ನಿಯಮ ಜಾರಿಗೊಳಿಸಲಾಗಿದೆ.
ಮೊದಲೇರಡು ಅಲೆಯಲ್ಲಿ ಕೊರೊನಾ ಹರಡಲು ಮಹಾರಾಷ್ಟ್ರ ಕಾರಣವಾಗಿದ್ದರಿಂದ ಇದು ಮರುಕಳಿಸದಂತೆ ಕಟ್ಟೆಚ್ಚರವಹಿಸಲಾಗಿದೆ. ಇದರೊಂದಿಗೆ ಗೋವಾ ಗಡಿಯಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.