ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆಯಿಂದ 5 ದಿನ ಬೆಂಗಳೂರಿನಲ್ಲಿ ಗ್ರೀನ್ ಪಟಾಕಿ ಮಾರಾಟ; ಪಟಾಕಿ ಹೊಡೆದು ಇಬ್ಬರು ಜೈಲುಪಾಲು..!

Kariyappa N by Kariyappa N
November 12, 2020
in Newsbeat, Samagra karnataka, ರಾಜ್ಯ
fireworks
Share on FacebookShare on TwitterShare on WhatsappShare on Telegram

ಬೆಂಗಳೂರು: ದೀಪಗಳ ಹಬ್ಬ ದೀಪಾವಳಿ ಹಬ್ಬಕ್ಕೆ ಇನ್ನೇನು ಎರಡೇ ದಿನಗಳು ಬಾಕಿ ಇವೆ. ದೀಪಾವಳಿ ಹಬ್ಬಕ್ಕೆ ಪಟಾಕಿಗಳೇ ಇಲ್ಲಾ ಅಂದ್ರೆ, ಊಟಕ್ಕೆ ಉಪ್ಪಿನ ಕಾಯಿ ಇಲ್ಲದಂತೆಯೇ ಸರಿ.
ಈಗಾಗಲೇ ಸಾಮಾನ್ಯ ಪಟಾಕಿಗಳ ಮಾರಾಟ ಮತ್ತು ದೀಪಾವಳಿ ಹಬ್ಬದ ದಿನಗಳಲ್ಲಿ ಸಿಡಿಸುವುದನ್ನು ರಾಜ್ಯ ಸರ್ಕಾರ ಬ್ಯಾನ್ ಮಾಡಿದೆ. ಹೆಚ್ಚು ಶಬ್ದ ಹಾಗೂ ಮಾಲಿನ್ಯ ಮಾಡುವ ಪಟಾಕಿಗಳ ಬದಲು ಶೇ.30ರಷ್ಟು ಕಡಿಮೆ ಮಾಲಿನ್ಯ ಮಾಡುವ ಹಸಿರು ಪಟಾಕಿಗಳ ಮಾರಾಟ ಹಾಗೂ ಸಿಡಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.


ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾಳೆಯಿಂದ ನಾಲ್ಕು ದಿನಗಳ ಕಾಲ ಗ್ರೀನ್ ಪಟಾಕಿ ಮಾರಾಟ ಆರಂಭವಾಗಿದ್ದು, ಪೊಲೀಸರು ಹಾಗೂ ಸ್ಥಳೀಯ ಆಡಳಿತಗಳಿಂದ ಗ್ರೀನ್ ಪಟಾಕಿ ಮಾರಾಟಕ್ಕೆ ಲೈಸೆನ್ಸ್ ನೀಡಲಾಗುತ್ತಿದೆ.
ರಾಜಧಾನಿ ಬೆಂಗಳೂರಿನಲ್ಲಿ ಹಸಿರು ಪಟಾಕಿ ಮಾರಾಟಕ್ಕೆ 60 ಮೈದಾನಗಳನ್ನು ಬಿಬಿಎಂಪಿ ಗುರುತಿಸಿದೆ. ಈ 60 ಮೈದಾನಗಳಲ್ಲಿ ಕೇವಲ 458 ಮಂದಿ ಮಾರಾಟಗಾರರಿಗೆ ಮಾತ್ರ ಗ್ರೀನ್ ಪಟಾಕಿ ಮಾರಲು ಲೈಸೆನ್ಸ್ ನೀಡಲು ಬಿಬಿಎಂಪಿ ನಿರ್ಧರಿಸಿದೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಹಸಿರು ಪಟಾಕಿ ಮಾತ್ರ ಮಾರಾಟ..!
ಸಿಎಸ್‍ಐಆರ್ ಮತ್ತು ನೀರಿ ಸಂಸ್ಥೆಯು ದೃಢೀಕರಿಸಿದ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಒಂದೊಮ್ಮೆ ನಿಯಮ ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಯನ್ನಷ್ಟೇ ಸಿಡಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ತಮಿಳುನಾಡಿನ ಶಿವಕಾಶಿಯಿಂದ ಸಾಕಷ್ಟು ಹಸಿರು ಪಟಾಕಿಯನ್ನು ಖರೀದಿಸಿರುವ ಮಾರಾಟಗಾರರು, ಮಳಿಗೆ ತೆರೆಯಲು ವಾರದ ಹಿಂದೆಯೇ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಇಂದು ದಿನಗಳ ಕಾಲ ಪಟಾಕಿ ಮಾರಾಟಕ್ಕೆ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಮಾರಾಟಗಾರರ ಅರ್ಜಿ ಪರಿಶೀಲನೆ ನಡೆಸಿ ಲೈಸೆನ್ಸ್ ನೀಡಲಿದ್ದಾರೆ.

Bursting green crackers
ನ.16ವರೆಗೆ ಅಂದರೆ ಸೋಮವಾರದವರೆಗೆ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶವಿದ್ದು, ನಾಳೆಯಿಂದ ಹಸಿರು ಪಟಾಕಿಗಳನ್ನು ಮಾರಾಟ ಮಾಡಬಹುದಾಗಿದೆ. ಪಟಾಕಿಗಳನ್ನು ಮಾರಾಟ ಮಾಡಲು ಸುರಕ್ಷಿತವಾಗಿರುವ ಬೆಂಗಳೂರು ನಗರದ 60 ಮೈದಾನಗಳ ಪಟ್ಟಿಯನ್ನು ಬಿಬಿಎಂಪಿ, ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದೆ. ಪೊಲೀಸ್ ಇಲಾಖೆಯು ವರ್ತಕರಿಂದ ಅರ್ಜಿ ಸ್ವೀಕರಿಸಿದ್ದು, ಅಗ್ನಿಶಾಮಕ ಇಲಾಖೆಯಿಂದ ನಿರಪೇಕ್ಷಣಾ ಪತ್ರ ನೀಡಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲಾಗುತ್ತದೆ.

ದಿಲ್ಲಿಯಲ್ಲಿ ಪಟಾಕಿ ಸಿಡಿಸಿದ ಇಬ್ಬರು ಅರೆಸ್ಟ್..!
ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಕಳೆದ ವಾರ ನ.7ರಿಂದಲೇ ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ನಿಷೇಧ ಮಾಡಲಾಗಿದೆ.
ಆದರೆ, ಸರ್ಕಾರದ ಕಠಿಣ ಆದೇಶ ಉಲ್ಲಂಘಿಸಿ ಪಟಾಕಿ ಸಿಡಿಸಿದ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಹಬ್ಬದ ಖುಷಿಯಲ್ಲಿರಬೇಕಾದ ಇಬ್ಬರು ಈಗ ಜೈಲಿನ ಕಂಬಿ ಎಣಿಸುತ್ತಿದ್ದಾರೆ.
ಕಳೆದ ಒಂದು ವಾರದಿಂದ ದೆಹಲಿಯಲ್ಲಿ ಈವರೆಗೆ ಪಟಾಕಿ ಮಾರಾಟ ಮಾಡಿದ ಆರೋಪದಡಿ 37 ಪ್ರಕರಣಗಳನ್ನು ದಾಖಲಿಸಿರುವ ದೆಹಲಿ ಪೊಲೀಸರು, 32 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 2794 ಕೆ.ಜಿ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ.
ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ನ.7ರಿಂದ 30ರವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ನಿಷೇಧಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 37 casesdelhi banGreen FireworksSale in Bengalurutomorrowtwo arrest
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram