ಬೆಂಗಳೂರು : ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ಸುಗ್ರೀವಾಜ್ಞಾಗೆ ರಾಜ್ಯಪಾಲ ವಜುಭಾಯ್ ವಾಲಾ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುತ್ತಿದ್ದಂತೆ ರಾಜ್ಯ ಸರ್ಕಾರ ಸೋಮವಾರ ಸಂಜೆ ಭೂ ಸುಧಾರಣೆ ಕಾಯ್ದೆಯ 1921ರ ಸೆಕ್ಷನ್ 79 ಎ, ಬಿ, ಸಿ ಮತ್ತು 80ನ್ನು ಪೂರ್ವಾನ್ವಯವಾಗುವಂತೆ ತಿದ್ದುಪಡಿ ತಂದಿರುವ ಸುಗ್ರೀವಾಜ್ಞೆಯನ್ನು ಗೆಜೆಟ್ ನಲ್ಲಿ ಪ್ರಕಟಿಸಿದೆ.
ವಿವಾದಿತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ರಾಜ್ಯದ ರೈತರು ಸೇರಿದಂತೆ ವಿಪಕ್ಷಗಳಿಂದ ತೀವ್ರವಾದ ವಿರೋಧ ವ್ಯಕ್ತವಾಗಿತ್ತು. ಈ ಕಾಯ್ದೆಯಿಂದ ರೈತರಿಗೆ ಅನಾನುಕೂಲವಾಗಲಿದ್ದು, ರಿಯಲ್ ಎಸ್ಟೇಟ್ ದಂಧೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಆದ್ರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಬಿಜೆಪಿ ಸರ್ಕಾರ, ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿದೆ. ಈ ಆದೇಶದ ಪ್ರಕಾರ ರಾಜ್ಯದಲ್ಲಿ ಕೃಷಿಕ ಕುಟುಂಬಕ್ಕೆ ಸೇರದವರೂ ಸಹ ಕೃಷಿ ಭೂಮಿ ಖರೀದಿಸಬಹುದಾಗಿದೆ.