ಬೆಂಗಳುರು: ಸೇವೆ ಖಾಯಂಗೆ ಆಗ್ರಹಿಸಿ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದ ಗುತ್ತಿಗೆ ವೈದ್ಯರು ವಾಪಸ್ ಪಡೆದಿದ್ದಾರೆ.
ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯರ ಸೇವೆ ಖಾಯಂ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಆರಂಭಿಸಬೇಕಿದ್ದ ಮುಷ್ಕರ ವಾಪಸ್ ಪಡೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜತೆ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಿದರು. ಸಭೆಯಲ್ಲಿ ಗುತ್ತಿಗೆ ನೌಕರರ ಖಾಯಂಗೆ ಯಡಿಯೂರಪ್ಪ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಗುತ್ತಿಗೆ ವೈದ್ಯರ ಸೇವೆ ಖಾಯಂ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಸುಮಾರು 507 ಗುತ್ತಿಗೆ ಆಧಾರದ ವೈದ್ಯರ ಸೇವೆ ಖಾಯಂ ಮಾಡಲಾಗುವುದು. ಸೇವೆ ಖಾಯಂ ಮಾಡಲು ಕೆಲ ನಿಯಮಗಳ ಬದಲಾವಣೆ ಮಾಡಬೇಕಿದೆ. ನಿಯಮಗಳ ಬದಲಾವಣೆ ಬಳಿಕ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಸೇವೆ ಖಾಯಂಗೆ ಸರ್ಕಾರ ಒಪ್ಪಿದೆ. ಹೀಗಾಗಿ ವೈದ್ಯರು ಮುಷ್ಕರಕ್ಕೆ ಕರೆ ನೀಡಬಾರದು. ಆದೇಶ ಹೊರಬರುವರೆಗೂ ಕಾಯುವಂತೆ ಶ್ರೀರಾಮುಲು ಸಲಹೆ ನೀಡಿದ್ದಾರೆ.
ಬಾಗಲಕೋಟೆ ಬಿಜೆಪಿಯಲ್ಲಿ ಸ್ಫೋಟಗೊಂಡ ಭಿನ್ನಮತ
ಬಾಗಲಕೋಟೆ: ವಕ್ಫ್ ಬೋರ್ಡ್ (Waqf Board) ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡ ಘಟನೆ ನಡೆಯಿತು. ಕರ್ನಾಟಕ ಬಿಜೆಪಿ ರಾಜ್ಯವ್ಯಾಪಿ ವಕ್ಫ್ ವಿರುದ್ಧ ನಮ್ಮ ಭೂಮಿ...