ಬೆಂಗಳೂರು: ರಾಜ್ಯ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಂಡ ಉಪನ್ಯಾಸಕರಿಗೆ ಕೌನ್ಸೆಲಿಂಗ್ ಮಾಡಲು ಹಣಖಾಸು ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲು ಹಣಕಾಸು ಇಲಾಖೆ ಹಸಿರು ನಿಶಾನೆ ತೊರಿಸಿದೆ. ಮುಖ್ಯಮಂತ್ರಿಗಳ ಅನುಮೋದನೆ ದೊರಕಿದ ತಕ್ಷಣ ಶೀಘ್ರ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.
2018ರಲ್ಲಿ ಪಿಯು ಉಪನ್ಯಾಸಕರ ನೇಮಕಾತಿಗಾಗಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆ ಪಟ್ಟಿಯೂ ಅಂತಿಮವಾಗಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯದ ಕಾರಣಕ್ಕೆ ಅಭ್ಯರ್ಥಿಗಳ ಕೌನ್ಸೆಲಿಂಗ್ ಮುಂದೂಡಲಾಗಿತ್ತು.
ಸುರೇಶ್‍ಕುಮಾರ್ ಧನ್ಯವಾದ ಹೇಳಿದ್ದ ಸಿದ್ದು
ಪಿಯುಸಿ ಉಪನ್ಯಾಸಕರ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸಲು ಕಾರಣರಾದ ಸಚಿವ ಸುರೇಶ್ ಕುಮಾರ್‍ಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದರೆ.
ಕೌನ್ಸೆಲಿಂಗ್‍ಗೆ ಹಾಜರಾಗುವ ಅಭ್ಯರ್ಥಿಗಳಿಗೂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕಾರಣ, ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರ್ಕರಿಯೆ ಸ್ಥಗಿತಗೊಳಿಸಿದವೇ ಹೊರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಇದ