ಕೊನೆಗೂ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ್ದು, ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ. ಶುಕ್ರವಾರಂದು ಮೂರನೇ ಹಂತದ ಲಾಕ್ ಡೌನ್ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ, ಕೆಲ ನಿರ್ಬಂಧಗಳೊಂದಿಗೆ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಒಪ್ಪಿಗೆ ಸೂಚಿಸಿತ್ತು. ಇದೀಗ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಇಂದು ರಾಜ್ಯ ಸರ್ಕಾರ ತಾನೂ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮೇ 4 ರಿಂದಲೇ ರೆಡ್, ಆರೇಂಜ್ ಹಾಗೂ ಗ್ರೀನ್ ಜೋನ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ.
ಮದ್ಯ ಮಾರಾಟದ ವೇಳೆ ಸಾಮಾಜಿಕ ಅಂತರ (6 ಅಡಿ) ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಮ್ಮೆಲೆ 5 ಜನರು ಮಾತ್ರ ಮದ್ಯದಂಗಡಿಯಲ್ಲಿ ಮದ್ಯ ಖರೀದಿಸಬಹುದಾಗಿದೆ. ಮದ್ಯದಂಗಡಿಯಲ್ಲಿ ಮದ್ಯ ಸೇವನೆಯನ್ನು ನಿಷೇಧಿಸಲಾಗಿದ್ದು, ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ.








