ನವದೆಹಲಿ : ಕೊರೊನಾ ವೈರಸ್ ಸ್ಫೋಟದ ಜೊತೆ ಜೊತೆಗೆ ದೇಶದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದ್ದು, ಶಾಲೆ ಕಾಲೇಜುಗಳು ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳಾಗುತ್ತಿದೆ.
ಇಂದಿನಿಂದ ಶಾಲಾ-ಕಾಲೇಜುಗಳು ಪ್ರಾಯೋಗಿಕವಾಗಿ ಪುನಾರಂಭಕ್ಕೆ ಹರಿಯಾಣ, ಅಸ್ಸಾಂ, ಜಮ್ಮು ಕಾಶ್ಮೀರ ರಾಜ್ಯ ಸರ್ಕಾರಗಳು ಗ್ರೀನ್ ಸಿಗ್ನಲ್ ನೀಡಿವೆ.
ಇನ್ನು ಮತ್ತಷ್ಟು ರಾಜ್ಯಗಳಲ್ಲಿ ಶಾಲಾ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ತಯಾರಿಗಳು ಆರಂಭವಾಗಿದೆ.
ದೆಹಲಿಯಲ್ಲಿ ಅಕ್ಟೋಬರ್ 5 ರಿಂದ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಂಡು ಶಾಲೆ ಕಾಲೇಜು ಪುನಾರಂಭಿಸಲು ಕೇಜ್ರಿವಾಲ್ ಸರ್ಕಾರ ನಿರ್ಧಾರ ಮಾಡಿದೆ.
ಲ್ಯಾಂಡಿಂಗ್ ವೇಳೆ ವಿಮಾನ ಪತನ : 22 ಮಂದಿ ಸಜೀವ ದಹನ
ಬಿಹಾರದಲ್ಲಿ ಸೆಪ್ಟೆಂಬರ್ 28 ರಿಂದ ಕಂಟೈನ್ಮೆಂಟ್ ಝೋನ್ ಹೊರತಾದ ಪ್ರದೇಶಗಳಲ್ಲಿ 9 ರಿಂದ 12ನೇ ತರಗತಿ ಮಕ್ಕಳು ಶಾಲೆಗೆ ತೆರಳಿ ಶಿಕ್ಷಕರಿಂದ ಶೈಕ್ಷಣಿಕ ಮಾಹಿತಿ ಪಡೆದುಕೊಳ್ಳಬಹುದು ಎಂದು ಸೂಚಿಸಲಾಗಿದೆ.
ತ್ರಿಪುರದಲ್ಲಿ ಅಕ್ಟೋಬರ್ 5 ರಿಂದ 9-12ನೇ ತರಗತಿ ವಿದ್ಯಾರ್ಥಿಗಳು ಪೋಷಕರ ಅನುಮತಿ ಮೇರೆಗ ಶಾಲೆಗೆ ಬಂದು ಶಿಕ್ಷಕರನ್ನು ಸಂಪರ್ಕಿಸಬಹುದು ಎಂದು ಶಿಕ್ಷಣ ಸಚಿವ ರತನ್ ಲಾಲ್ ನಾಥ್ ಹೇಳಿದ್ದಾರೆ.
ಅಕ್ಟೋಬರ್ 1 ರಿಂದ ತಮಿಳುನಾಡಿನಲ್ಲಿ 10,11,12 ನೇ ತರಗತಿ ವಿದ್ಯಾರ್ಥಿಗಳು ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಶಾಲೆ ಕಾಲೇಜಿಗೆ ತೆರಳಬಹುದಾಗಿದ್ದು ಶಿಕ್ಷಕರಿಂದ ಪ್ರಾಥಮಿಕ ಮಾಹಿತಿ ಪಡೆದುಕೊಳ್ಳಬಹುದು ಎಂದು ರಾಜ್ಯ ಸರ್ಕಾರ ಹೇಳಿದೆ.








