ನವದೆಹಲಿ: ಇಂದು ದೇಶದಲ್ಲಿ 75ನೇ ಗಣರಾಜ್ಯೋತ್ಸವದ (75th Republic Day) ಆಚರಿಸಲಾಗುತ್ತಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಈ ವೇಳೆ ಪ್ರಧಾನಿ ಮೋದಿ ಅವರು ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಶುಭಾಶಯ ತಿಳಿಸಿದ್ದಾರೆ.
2024ನೇ ಸಾಲಿನ ಪದ್ಮ ಪ್ರಶಸ್ತಿಗೆ (Padma Awards 2024) ಆಯ್ಕೆಯಾಗಿರುವ 132 ಸಾಧಕರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ, ಶುಭ ಕೋರಿದ್ದಾರೆ. ಈ ಬಾರಿಯ ಪದ್ಮಶ್ರೀ ಪ್ರಶಸ್ತಿಗೆ 9 ಜನರು ಆಯ್ಕೆಯಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಸೇವೆಯಿಂದ ರಾಷ್ಟ್ರದ ಘನತೆ ಹೆಚ್ಚಿದ್ದಾರೆ. ವಿವಿಧ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆ ತರುತ್ತಿರುವ ಸಾಧಕರಿಗೆ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಕನ್ನಡಿಗರಾದ ಸೀತಾರಾಮ್ ಜಿಂದಾಲ್ (ವ್ಯಾಪಾರ ಮತ್ತು ಕೈಗಾರಿಕೆ) ಭಾಜನರಾಗಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ರೋಹನ್ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್ (ವೈದ್ಯಕೀಯ), ಅನುಪಮಾ ಹೊಸಕೆರೆ (ಕಲೆ), ಶ್ರೀಧರ್ ಮಕಮ್ ಕೃಷ್ಣಮೂರ್ತಿ (ಸಾಹಿತ್ಯ ಮತ್ತು ಶಿಕ್ಷಣ), ಕೆ.ಎಸ್.ರಾಜಣ್ಣ (ಸಾಮಾಜಿಕ ಕಾರ್ಯ), ಚಂದ್ರಶೇಖರ್ ಚನ್ನಪಟ್ಟಣ ರಾಜಣ್ಣಾಚಾರ್ (ವೈದ್ಯಕೀಯ), ಸೋಮಣ್ಣ (ಸಾಮಾಜಿಕ ಕಾರ್ಯ), ಶಶಿ ಸೋನಿ (ವ್ಯಾಪಾರ ಮತ್ತು ಕೈಗಾರಿಕೆ) ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.