ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19ರಿಂದ ಆರಂಭವಾಗಲಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿದವರು ಯೋಜನೆಯ ಫಲಾನುಭವಿಯಾಗುತ್ತಾರೆ ಎಂದು ಹೇಳಿದ್ದಾರೆ. ಇಲ್ಲಿಯವರೆಗೂ ಹಲವಾರು ಅಡೆತಡೆ ತೊಂದರೆಯಿಂದಾಗಿ ಈ ಯೋಜನೆಯ ಚಾಲನೆಗೆ ವಿಘ್ನಗಳು ಎದುರಾಗುತ್ತಿದ್ದರು. ಸದ್ಯ ಈ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.