ಸರ್ಕಾರದ ಮಹತ್ವದ ಯೋಜನೆ ಗೃಹ ಲಕ್ಷ್ಮೀಗೆ ಈಗಾಗಲೇ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಎಂಬುವುದರ ಕುರಿತು ಬ್ಯಾಂಕ್ ಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೀಗಾಗಿ ಎಲ್ಲ ಬ್ಯಾಂಕ್ ಗಳು ರಶ್ ಆಗಿವೆ. ಹಣ ಬಾರದ ಮಹಿಳೆಯರು ಕಂಗಾಲಾಗಿದ್ದಾರೆ. ಅಗಸ್ಟ್ 30 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಗ್ಯಾರಂಟಿಗೆ ಚಾಲನೆ ನೀಡಿತ್ತು. ಅಲ್ಲದೇ, ಈ ಸಂದರ್ಭದಲ್ಲಿ ಮಹಿಳಾ ಫಲಾನುಭವಿಗಳಿಗೆ ಸರ್ಕಾರ ಹಣವನ್ನು ಕೂಡ ಕ್ರೆಡಿಟ್ ಮಾಡಿತ್ತು. ಖಾತೆಗೆ ಬಂದ ಬ್ಯಾಂಕಿನ ಮೆಸೇಜ್ ಕೆಲ ಮಹಿಳೆಯರಿಗೆ ಬಂದಿದ್ದರೆ, ಇನ್ನೂ ಹಲವರಿಗೆ ಬಂದಿಲ್ಲ. ಹೀಗಾಗಿ ಮಹಿಳೆಯರು ಬ್ಯಾಂಕ್ ಮುಂದೆ ಜಮಾಯಿಸಿದ್ದಾರೆ.