ಚಿಕ್ಕೋಡಿ: ಯುವಕನೊಬ್ಬ ಮದುವೆಗೆ ಒಂದು ದಿನ ಬಾಕಿ ಇದ್ದ ವೇಳೆಯೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಜುಂಜರವಾಡ ಗ್ರಾಮದಲ್ಲಿ ನಡೆದಿದೆ. ಜುಂಜರವಾಡ ಆರ್ ಸಿ ಗ್ರಾಮದ ನಿವಾಸಿ ಸದಾಶಿವ ರಾಮಪ್ಪ ಹೋಸಲ್ಕಾರ (31) ಮದುವೆಯ ಹಿಂದಿನ ದಿನವೇ ಸಾವನ್ನಪ್ಪಿದ ದುರ್ದೈವಿ.
ಸದಾಶಿವ ಅವರ ಮದುವೆ ಸೆಪ್ಟೆಂಬರ್ 5ರಂದು ನಿಗದಿಯಾಗಿತ್ತು. ಹೀಗಾಗಿ ಮಂಗಳವಾರ ಮದುವೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ಮನೆಯನ್ನು ತಳಿರು- ತೋರಣಗಳಿಂದ ಅಲಂಕರಿಸಲಾಗುತ್ತಿತ್ತು. ಈ ವೇಳೆ ಫೋನ್ ನಲ್ಲಿ ಮಾತನಾಡುತ್ತಿದ್ದ ಸದಾಶಿವಗೆ ಏಕಾಏಕಿ ಹೃದಯಾಘಾತವಾಗಿದೆ. ಕೂಡಲೇ ನೆಲಕ್ಕೆ ಕುಸಿದು ಬಿದ್ದಿದ್ದಾರೆ.
ಗಾಬರಿಗೊಂಡ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಧಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.