ಬೆಂಗಳೂರು: ಏರ್ ಪೋರ್ಟ್ ನಲ್ಲಿ ಭೀಕರ ಹತ್ಯೆ ನಡೆದಿರುವ ಘಟನೆ ನಡೆದಿದೆ. ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಈ ಘಟನೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ (Bengaluru Airport) ನಡೆದಿದೆ. ಏರ್ ಪೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಕೊಲೆಯಾಗಿದ್ದಾನೆ. ತುಮಕೂರು (Tumakuru) ಜಿಲ್ಲೆಯ ಮಧುಗಿರಿ ತಾಲೂಕಿನ ನಿವಾಸಿ ರಮೇಶ್ ಕೊಲೆ ಆರೋಪಿ. ರಾಮಕೃಷ್ಣ (45) ಕೊಲೆಯಾಗಿರುವ ವ್ಯಕ್ತಿ. ಬೆಂಗಳೂರು ಏರ್ ಪೋರ್ಟ್ ನ ಟರ್ಮಿನಲ್ ಒಂದರಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಬಿಎಂಟಿಸಿ ಬಸ್ ನಲ್ಲಿ ಏರ್ ಪೋರ್ಟ್ ಗೆ ಬಂದಿದ್ದ ಕೊಲೆ ಆರೋಪಿ, ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ ರಾಮಕೃಷ್ಣನನ್ನುಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಕೊಲೆಯಾಗುವುದಕ್ಕೂ ಮುನ್ನ ಫೋನ್ ನಲ್ಲಿ ಇಬ್ಬರಿಗೂ ಜಗಳವಾಗಿದೆ. ನಂತರ ಏಕಾಏಕಿ ಅಲ್ಲಿಗೆ ಬಂದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ರಕ್ತದ ಮಡುವಿನಲ್ಲಿ ಏರ್ ಪೋರ್ಟ್ ನಲ್ಲಿ ಯುವಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








